Tuesday, 17th September 2019

‘ಶಿವಾರ್ಜುನ’ ನಾದ ಚಿರು

ನಿಶ್ಚಿತ ಕಂಬೈನ್‌ಸ್‌ ಲಾಂಛನದಲ್ಲಿ ಎಂ.ಬಿ.ಮಂಜುಳಾ ಶಿವಾರ್ಜುನ್ ಅವರು ನಿರ್ಮಿಸುತ್ತಿಿರುವ, ಚಿರಂಜೀವಿ ಸರ್ಜಾ ನಾಯಕನಾಗಿ ನಟಿಸುತ್ತಿರುವ, ಹೊಸ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. ಈ ಚಿತ್ರಕ್ಕೆೆ ‘ಶಿವಾರ್ಜುನ‘ ಎಂಬ ಟೈಟಲ್ ಅಂತಿಮಗೊಳಿಸಲಾಗಿದೆ. . ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ವರ್ಷಗಳಿಂದ ನಿರ್ಮಾಣ ನಿರ್ವಾಹಕರಾಗಿ ಕಾರ್ಯ ನಿರ್ವಹಿಸುತ್ತಿರುವ ಶಿವಾರ್ಜುನ್ ಅವರ ನಿರ್ಮಾಣದ ಚಿತ್ರವಿದು. ನಿರ್ಮಾಪಕರ ಹೆಸರೇ ಚಿತ್ರದ ಶೀರ್ಷಿಕೆಯಾಗಿರುವುದು ವಿಶೇಷ.

ಶಿವತೇಜಸ್ ಚಿತ್ರಕಥೆ ಬರೆದು ನಿರ್ದೇಶಿಸುತ್ತಿಿರುವ ಈ ಚಿತ್ರಕ್ಕೆೆ ಬೆಂಗಳೂರು, ಮೈಸೂರು ಮುಂತಾದ ಕಡೆ ಚಿತ್ರೀಕರಣ ನಡೆಯುತ್ತಿಿದೆ. ಹೆಚ್.ಸಿ.ವೇಣು ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆೆ ಸುರಾಗ್ ಸಂಗೀತ ನೀಡುತ್ತಿಿದ್ದಾಾರೆ. ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ, ವಿನೋದ್, ಥ್ರಿಿಲ್ಲರ್ ಮಂಜು ಅವರ ಸಾಹಸ ನಿರ್ದೇಶನ ಹಾಗೂ ಮುರಳಿ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿಿದೆ. ಯೋಗರಾಜ್ ಭಟ್ ಹಾಗೂ ಚೇತನ್‌ಕುಮಾರ್ ಈ ಚಿತ್ರದ ಹಾಡುಗಳನ್ನು ಬರೆದಿದ್ದಾಾರೆ. ಚಿತ್ರದ ತಾರಾಬಳಗದಲ್ಲಿ ಅಮೃತಾ, ಅಕ್ಷತಾ, ತಾರಾ, ಅವಿನಾಶ್, ಕುರಿ ಪ್ರತಾಪ್, ಸಾಧುಕೋಕಿಲ ಸೇರಿದಂತೆ ಮುಂತಾದವರಿದ್ದಾಾರೆ.

Leave a Reply

Your email address will not be published. Required fields are marked *