Tuesday, 5th July 2022

ಸಿದ್ದರಾಮಯ್ಯ ದಾವಣಗೆರೆ ಪ್ರವಾಸ ರದ್ದು

ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದಾವಣಗೆರೆ ಪ್ರವಾಸವನ್ನು ರದ್ದು ಮಾಡಿದ್ದಾರೆ.

ಬುಧವಾರ ದಾವಣಗೆರೆಯಲ್ಲಿ ನಡೆಯಲಿರುವ ಜಾತಿ ಗಣತಿ ಅನುಷ್ಠಾನದ ಹೋರಾಟಕ್ಕೆ ಸಿದ್ದರಾಮಯ್ಯ ಅವರು ಆಗಮಿಸಬೇಕಿತ್ತು. ಆದರೆ ಮೋಡ ಕವಿದ ವಾತಾವರಣ ಇರುವುದರಿಂದ ಹೆಲಿಕಾಪ್ಟರ್ ಲ್ಯಾಂಡಿಂಗ್ಗೆ ಅವಕಾಶ ಸಿಕ್ಕಿಲ್ಲ. ಹೀಗಾಗಿ ದಾವಣಗೆರೆ ಪ್ರವಾಸವನ್ನು ರದ್ದು ಮಾಡಲಾಗಿದೆ.

ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಜಾತಿವಾರು ಸಮೀಕ್ಷೆ ಬಿಡುಗಡೆ ಮಾಡುವಂತೆ ಆಗ್ರಹಿಸಿ ದಾವಣಗೆರೆಯಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳ ಲಾಗಿದೆ. ಬೆಲೆ ಏರಿಕೆ ವಿರೋಧಿಸಿ ಕಿಸಾನ್ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.