Monday, 9th December 2019

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ತಹಸೀಲ್ದಾರ್ ಕಚೇರಿಯಲ್ಲಿ ಅಧಿಕಾರಿಗಳ ಸಭೆ ಕರೆದಿದ್ದು, ಮಾನವೀಯ ನೆಲೆಯಲ್ಲಿ

 

ಶಿರಸಿ:
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಶಿರಸಿ ತಾಲೂಕಿನಲ್ಲಿ ಅತಿವೃಷ್ಟಿಯಿಂದಾದ ಹಾನಿ ಮತ್ತು ಅದರ ನಿರ್ವಹಣೆಯ ಕುರಿತು ನಗರದ ತಹಸೀಲ್ದಾರ್ ಕಚೇರಿಯಲ್ಲಿ ಅಧಿಕಾರಿಗಳ ಸಭೆ ಕರೆದಿದ್ದು, ಮಾನವೀಯ ನೆಲೆಯಲ್ಲಿ ಎಲ್ಲ ಅಧಿಕಾರಿಗಳೂ ಕಾರ್ಯ ನಿರ್ವಹಿಸಬೇಕೆಂದು ಆದೇಶಿಸಿದರು.
ಅರಣ್ಯ ಇಲಾಖೆಯ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯ ತನದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಸರಿಯಾದ ಕ್ರಮ ಅಗತ್ಯ ಹಾಗೂ ಸಾರ್ವಜನಿಕರಿಗೆ ಸ್ಪಂದಿಸಬೇಕು. ನಿಮ್ ಈ ಬೇಜವಾಬ್ದಾರಿತನ ಸಹಿಸುವುದಿಲ್ಲವೆಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಇನ್ನು ಹೆಸ್ಕಾಂ ಹಾಗೂ ಪಿಡ್ಬುಡಿ ಇಲಾಖೆಯವರು ತಕ್ಷಣಕ್ಕೆ ಕಾರ್ಯಪ್ರವೃತ್ತರಾಗಿ ಅಪಘಾತ, ಆಗಬಹುದಾದ ಅನಾಹುತ ತಡೆಯುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕೆಂದರು.

Leave a Reply

Your email address will not be published. Required fields are marked *