Saturday, 10th June 2023

ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲು

ಚಂಡೀಗಢ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ವಿರುದ್ಧ ಹರ್ಯಾಣ ಪೊಲೀಸರು ಎಫ್ಐಆರ್ ದಾಖಲಿಸಿ ದ್ದಾರೆ. ಲಾಕ್ ಡೌನ್ ಸಮಯದಲ್ಲಿ ಜಾತಿನಿಂದನೆ ಮಾಡಿದ ಆರೋಪದಡಿ ಎಫ್ಐಆರ್ ದಾಖಲಿಸಲಾಗಿದೆ.

ದಲಿತ ಸಮಾಜದ ವಿರುದ್ಧ ಯುವರಾಜ್ ನಿಂದನಾತ್ಮಕ ಶಬ್ದ ಬಳಕೆ ಮಾಡಿದ್ದಾರೆಂದು ಎಂಟು ತಿಂಗಳ ಹಿಂದೆ ದೂರು ನೀಡ ಲಾಗಿತ್ತು. ಪೊಲೀಸರು ಯುವಿ ವಿರುದ್ಧ ಐಪಿಸಿ ಮತ್ತು ಎಸ್ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

2020ರ ಜೂನ್ ನಲ್ಲಿ ಕ್ರಿಕೆಟಿಗ ರೋಹಿತ್ ಶರ್ಮಾ ಜೊತೆ ಇನ್ಸ್ಟಾಗ್ರಾಮ್ ಲೈವ್ ನಲ್ಲಿ ಮಾತನಾಡುವ ವೇಳೆ ಜಾತಿ ನಿಂದನೆ ಮಾಡಿದ್ದಾರೆಂದು ಆರೋಪಿಸಲಾಗಿದೆ.

error: Content is protected !!