Friday, 1st December 2023

ಐಪಿಎಲ್’ಗೆ ಕ್ಷಣಗಣನೆ: ಫ್ರಾಂಚೈಸಿ ಆಟಗಾರರು ಗಾಯಕ್ಕೆ ತುತ್ತು

ಬೆಂಗಳೂರು: 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 16ನೇ ಸೀಸನ್ ಆರಂಭಕ್ಕೆ ದಿನಗಣನೆ ಆರಂಬವಾಗುತ್ತಿದ್ದಂತೆಯೇ, ಮುಂಬೈ ಇಂಡಿಯನ್ಸ್, ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಕ್ಕೆ ಗಾಯದ ಸಮಸ್ಯೆ ಎದುರಾಗಿದೆ.

ಇಂಗ್ಲೆಂಡ್‌ನ ಆಲ್‌ರೌಂಡರ್ ವಿಲ್ ಜಾಕ್ಸ್ ಗಾಯದ ಕಾರಣದಿಂದಾಗಿ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಿಂದ ಹೊರ ಬಿದ್ದಿದ್ದಾರೆ. ಐಪಿಎಲ್ ಆಟಗಾರರ ಹರಾಜಿನಲ್ಲಿ ವಿಲ್ ಜಾಕ್ಸ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ 3.2 ಕೋಟಿ ರೂ.ಗೆ ಖರೀದಿಸಿತ್ತು.

ಮೀರ್‌ಪುರದಲ್ಲಿ ಬಾಂಗ್ಲಾದೇಶದ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್ ಮಾಡು ತ್ತಿದ್ದಾಗ ವಿಲ್ ಜಾಕ್ಸ್ ಸ್ನಾಯು ಸೆಳೆತಕ್ಕೆ ಒಳಗಾ ಗಿದ್ದರು.

ಈ ವರ್ಷದ ಅಕ್ಟೋಬರ್-ನವೆಂಬರ್‌ನಲ್ಲಿ ಭಾರತದಲ್ಲಿ ನಡೆಯಲಿರುವ 2023ರ ಏಕದಿನ ವಿಶ್ವಕಪ್‌ ಟೂರ್ನಿಗಾಗಿ ಇಂಗ್ಲೆಂಡ್‌ ರಾಷ್ಟ್ರೀಯ ತಂಡದಲ್ಲಿ ಆಡುವ ಅವಕಾಶವನ್ನು ಪಡೆಯಲಿದ್ದರು.

1 ಕೋಟಿ ರೂ. ಮೂಲ ಬೆಲೆಯೊಂದಿಗೆ ಐಪಿಎಲ್ ಹರಾಜಿನಲ್ಲಿ ಹೆಸರು ನೋಂದಾಯಿಸಿದ್ದ ಮೈಕೆಲ್ ಬ್ರೇಸ್‌ವೆಲ್ ಅವರನ್ನು ಯಾವುದೇ ತಂಡ ಖರೀದಿಸಿರಲಿಲ್ಲ. ಏಕೆಂದರೆ, ಅವರು ಭಾರತೀಯ ಟಿ20 ಲೀಗ್‌ನಲ್ಲಿ ಈ ಹಿಂದಿನ ಅನುಭವವನ್ನು ಹೊಂದಿರಲಿಲ್ಲ. ಆದರೆ, ಭಾರತಕ್ಕೆ ನ್ಯೂಜಿಲೆಂಡ್ ಪ್ರವಾಸದ ವೇಳೆ ಅದ್ಭುತವಾದ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ.

error: Content is protected !!