Sunday, 19th May 2024

ನಿವೃತ್ತಿ ಘೋಷಿಸಿದ ವೇಗಿ ಡೇಲ್ ಸ್ಟೇನ್

ಜೋಹಾನ್ಸ್’ಬರ್ಗ್‌: ದಕ್ಷಿಣ ಆಫ್ರಿಕಾದ ವೇಗಿ ಡೇಲ್ ಸ್ಟೇನ್ ಎಲ್ಲ ಮಾದರಿಯ ಕ್ರಿಕೆಟ್ ನಿಂದ ನಿವೃತ್ತಿ ಘೋಷಿಸಿ ದ್ದಾರೆ.

2004ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ್ದ ಕ್ರಿಕೆಟ್ ಜಗತ್ತು ಕಂಡ ಅತ್ಯಿತ್ತಮ ಬೌಲರ್‌ಗಳಲ್ಲಿ ಒಬ್ಬರಾದ ಡೇಲ್ ಸ್ಟೇಯ್ನ್ ಅವರು 93 ಟೆಸ್ಟ್‌ ಪಂದ್ಯಗಳಿಂದ 22.95 ಸರಾಸರಿಯಲ್ಲಿ 439 ವಿಕೆಟ್ ಪಡೆದಿದ್ದಾರೆ. ಫೆಬ್ರುವರು 2019ರಲ್ಲಿ ಕೊನೆಯ ಬಾರಿಗೆ ಟೆಸ್ಟ್ ಪಂದ್ಯ ಆಡಿದ್ದ ಸ್ಟೇಯ್ನ್, ಅದೇ ವರ್ಷದ ಆಗಸ್ಟ್‌ನಲ್ಲಿ ಟೆಸ್ಟ್‌ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದರು. ಕಳೆದ ವರ್ಷದ ಫೆಬ್ರುವರಿಯಲ್ಲಿ ಕೊನೆಯ ಬಾರಿಗೆ ಏಕದಿನ ಪಂದ್ಯ ಆಡಿದ್ದರು.

125 ಏಕದಿನ ಪಂದ್ಯಗಳನ್ನು ಆಡಿರುವ ಅವರು, 196 ವಿಕೆಟ್ ಪಡೆದಿದ್ದಾರೆ. 47 ಟಿ20 ಪಂದ್ಯಗಳಿಂದ 64 ವಿಕೆಟ್ ಉರುಳಿಸಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್‌ನ ಕಳೆದ ವರ್ಷದ ಸೀಸನ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಸ್ಟೇಯ್ನ್ ಆಡಿದ್ದರು.

ಅವರು 15 ವರ್ಷಗಳ ಕರಿಯರ್ ನಲ್ಲಿ 699 ವಿಕೆಟ್ ಪಡೆದುಕೊಂಡಿದ್ದಾರೆ. ಟೆಸ್ಟ್ ಪಂದ್ಯಗಳಲ್ಲಿ 439, ಏಕದಿನ ಪಂದ್ಯಗಳಲ್ಲಿ 169 ವಿಕೆಟ್ ಪಡೆದಿದ್ದಾರೆ. ಟಿ20 ಪಂದ್ಯಗಳಲ್ಲಿ 64 ವಿಕೆಟ್ ಗಳನ್ನು ಪಡೆದುಕೊಂಡಿದ್ದಾರೆ. 2021 ರಲ್ಲಿ ಶ್ರೀಲಂಕಾ ವಿರುದ್ಧ ಕೊನೆಯ ಪಂದ್ಯ ಆಡಿದ್ದರು.

ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಡೇಲ್ ಸ್ಟೇನ್ ಮಂಗಳವಾರ ಎಲ್ಲಾ ಪ್ರಕಾರದ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. 38 ವರ್ಷದ ಅವರು 93 ಟೆಸ್ಟ್‌ ಗಳು, 125 ಏಕದಿನ ಮತ್ತು 47 ಟಿ20 ಪಂದ್ಯಗಳಲ್ಲಿ ಆಡಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!