Saturday, 27th July 2024

ಮೂವರು ಅರ್ಚಕರನ್ನು ಹತ್ಯೆ ಆರೋಪಿಗಳ ಬಂಧನ

ಮಂಡ್ಯ: ಶ್ರೀ ಅರ್ಕೇಶ್ವರ ದೇವಾಲಯದಲ್ಲಿ ಮೂವರು ಅರ್ಚಕರನ್ನು ಹತ್ಯೆ ಮಾಡಿ ಹುಂಡಿಯ ಹಣ ದೋಚಿದ್ದ ಮೂವರು ಆರೋಪಿಗಳನ್ನು ಸೋಮವಾರ ಬಂಧಿಸುವಲ್ಲಿ ಮಂಡ್ಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಮದ್ದೂರು ತಾಲೂಕಿನ ಸಾದೊಳಲು ಗೇಟ್ ಬಳಿ ಆರೋಪಿಗಳ ಪತ್ತೆಗೆ ರಚಿಸಿದ್ದ ಗ್ರಾಮಾಂತರ ಪೋಲೀಸ್ ಠಾಣಾ ವೃತ್ತ ನಿರೀಕ್ಷಕ ಎನ್.ವಿ.ಮಹೇಶ್ ಹಾಗೂ ಪೂರ್ವ ಪೋಲೀಸ್ ಠಾಣೆಯ ಪಿ.ಎಸ್.ಐ ಶರತ್ ಕುಮಾರ್ ಅವರ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳನ್ನು ಆಂಧ್ರ ಪ್ರದೇಶದ ವಿಜಿ, ತೊಪ್ಪನಹಳ್ಳಿ ಗ್ರಾಮದ ಮಂಜ, ಅರೆಕಲ್ ದೊಡ್ಡಿ ಗ್ರಾಮದ ಗಾಂಧಿ ಎಂದು ಗುರುತಿಸ ಲಾಗಿದೆ. ಬಂಧನದ ವೇಳೆ ಪೊಲೀಸ್ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ಮೇಲೆ ಆರೋಪಿಗಳು ಕಲ್ಲು ಮತ್ತು ಚಾಕುಗಳಿಂದ ಹಲ್ಲೆ ನಡೆಸಲು ಮುಂದಾಗಿದ್ದಾರೆ.

ಎಚ್ಚೆತ್ತುಕೊಂಡ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ. ಆದರೂ ಆರೋಪಿಗಳು ಹಲ್ಲೆಗೆ ಮುಂದಾಗಿ ದ್ದಾರೆ. ಪೋಲೀಸರು ಮೂವರ ಆರೋಪಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ಭಯಭೀತರಾಗಿ ಓಡಲು ಯತ್ನಿಸಿದವರನ್ನು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಪೂರ್ವ ಪೋಲೀಸ್ ಠಾಣೆಯ ಪಿಎಸ್‌ಐ ಶರತ್ ಕುಮಾರ್ ಹಾಗೂ ಸಿಬ್ಬಂದಿಗಳಾದ ಅನಿಲ್ ಕುಮಾರ್, ಕೃಷ್ಣ ಕುಮಾರ್ ತೀವ್ರವಾಗಿ ಗಾಯಗೊಂಡಿದ್ದು, ಮದ್ದೂರು ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದ ಬಳಿಕ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಗುಂಡೇಟಿನಿಂದ ಗಾಯಗೊಂಡ ಆರೋಪಿಗಳನ್ನು ಮದ್ದೂರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಘಟನೆ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Leave a Reply

Your email address will not be published. Required fields are marked *

error: Content is protected !!