Saturday, 27th July 2024

ಬೆಟ್ಟಿಂಗ್: ಆರು ಮಂದಿ ಬಂಧನ, ಆರು ಲಕ್ಷ ನಗದು ವಶ

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2020ರ ಪಂದ್ಯದ ಮೇಲೆ ಬೆಟ್ಟಿಂಗ್ ಕಟ್ಟುತ್ತಿದ್ದ ಗುಂಪೊಂದನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.

ಒಟ್ಟು ಆರು ಮಂದಿಯನ್ನು ಬಂಧಿಸಿದ್ದು, ಅವರ ಬಳಿ ಇದ್ದ 6 ಮೊಬೈಲ್ ಜಪ್ತಿ ಮಾಡಲಾಗಿದೆ. 6 ಲಕ್ಷ ರು ನಗದು ಕೂಡಾ ಸಿಕ್ಕಿದೆ.

ಬಾಣಸವಾಡಿ ಠಾಣಾ ವ್ಯಾಪ್ತಿಯಲ್ಲಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು. ಪ್ರತಿ ಓವರ್, ಪ್ರತಿ ಎಸೆತ, ಪ್ರತಿ ರನ್ ಮೇಲೆ ಬೆಟ್ ಕಟ್ಟ ಲಾಗುತ್ತಿದೆ. ಸ್ಟಾರ್ ಆಟಗಾರರ ಮೇಲೆ ಹೆಚ್ಚಿನ ಬೆಟ್ಟಿಂಗ್ ಇದೆ. ಅತಿ ಕಡಿಮೆ ಮೊತ್ತದಿಂದ ದೊಡ್ಡ ಮೊತ್ತದವರೆಗೂ ದಂಧೆ ನಡೆಸುತ್ತಿದ್ದರು. ಮೊಬೈಲ್ ಅಪ್ಲಿಕೇಷನ್ ಮೂಲಕ ಗ್ರಾಹಕರನ್ನು ಸಂಪರ್ಕಿಸಿ ಹಣ ವ್ಯವಹಾರ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!