ಬೆಂಗಳೂರು: ಬೆಂಗಳೂರು ಪೊಲೀಸರ ಇತಿಹಾಸದಲ್ಲೇ ಬೃಹತ್ ಪ್ರಮಾಣದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ಮೊದಲ ಬಾರಿಗೆ ದೊಡ್ಡ ಮಟ್ಟದ ಗಾಂಜಾ ಸೀಜ್ ಮಾಡಲಾಗಿದ್ದು, ಅದು 1350 ಕೆಜಿ ಆಗಿದೆ ಎಂದು ತಿಳಿದು ಬಂದಿದೆ. ಗಾಂಜಾ ಸಾಗಿಸುತ್ತಿದ್ದ ಮೂವರನ್ನು ಬಂಧಿಸಲಾಗಿದ್ದು, ಇಬ್ಬರ ಹೆಸರು ಜ್ಞಾನಶೇಖರ್, ಸಿದ್ದನಾಥ ಎಂದು ತಿಳಿದು ಬಂದಿದೆ. ಇದಕ್ಕೂ ಮೊದಲು ಆಗಸ್‌ಟ್ 27ರಂದು 204 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿತ್ತು.
ಶೇಷಾದ್ರಿಪುರಂ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.