Wednesday, 29th May 2024

ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ದಿವಂಗತ ನಟ ಪುನೀತ್ ರಾಜ್ ಕುಮಾರ್ ಗೆ ರಾಜ್ಯ ಸರ್ಕಾರದಿಂದ ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿತ್ತು. ಇದೀಗ ಈ ಪ್ರಶಸ್ತಿಯನ್ನು ಶೀಘ್ರವೇ ಪ್ರಧಾನ ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಇಂದು ಪುನೀತ್ ರಾಜ್ ಕುಮಾರ್ ಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿ ಮಾತನಾಡಿದ ಅವರು, ಅಪ್ಪು ನಮ್ಮೆಲ್ಲರಿಗೂ ಪ್ರೇರಣೆ ಯಾಗಿದ್ದಾರೆ.

ಪುನೀತ್ ರಾಜ್ ಕುಮಾರ್ ಅಂಗಾಂಗ ದಾನ ಮಾಡುವ ಮೂಲಕ, ಸಾವಿನಲ್ಲೂ ಸಾರ್ಥ ಕತೆ ಮೆರೆದವರು. ನಮಗೂ ಅವರು ಪ್ರೇರಣೆಯಾದವರು. ಈಗಾಗಲೇ ಅವರಿಗೆ ಪ್ರಶಸ್ತಿ ಘೋಷಿಸಲಾಗಿದೆ.

ಅವರ ಕುಟುಂಬಸ್ಥರೊಂದಿಗೆ ಮಾತನಾಡಿ, ಶೀಘ್ರವೇ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ ಎಂಬುದಾಗಿ ತಿಳಿಸಿದರು.

error: Content is protected !!