Tuesday, 28th May 2024

ಶಾಸಕ ಶಿವಾನಂದ ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕು

ಬಸವನಬಾಗೇವಾಡಿ: ಶಾಸಕ ಶಿವಾನಂದ ಪಾಟೀಲ ಅವರು ಆರು ಬಾರಿ ವಿಧಾನಸಭೆಗೆ ಆಯ್ಕೆ ಆಗಿದ್ದಾರೆ ಅಲ್ಲದೇ  ಜಿಲ್ಲೆಯ ಹಿರಿಯ ಶಾಸಕರಾಗಿರುವ ಇವರಿಗೆ  ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಸಚಿವ ಸ್ಥಾನ  ನೀಡಬೇಕು ಎಂದು  ಮಸಬಿನಾಳದ ಕಾಂಗ್ರೆಸ  ಯುವ ಮುಖಂಡ ಹಣಮಂತರಾಯ ಗುದ್ದಿ ಒತ್ತಾಯಿಸಿ ದ್ದಾರೆ.
ಶಾಸಕ   ಶಿವಾನಂದ ಪಾಟೀಲ ಅವರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳನ್ನ ಮಾಡುವ ಮೂಲಕ ಅಭಿವೃದ್ದಿಪರ ಚಿಂತಕರಾಗಿದ್ದಾರೆ.  ಈ ನಿಟ್ಟಿನಲ್ಲಿ  ಶಾಸಕ ಶಿವಾನಂದ ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಬೇಕು ಇದರಿಂದ ಜಿಲ್ಲೆಯಲ್ಲಿ ಕಾಂಗ್ರೆಸ ಪಕ್ಷ ಮತ್ತಷ್ಟು ಬಲಿಷ್ಠವಾಗಲು ಸಾಧ್ಯವಾಗುತ್ತದೆ ಎಂದರು.
error: Content is protected !!