Friday, 23rd February 2024

ಧಾರವಾಡ ಗ್ರಾಮೀಣ ಕ್ಷೇತ್ರದಿಂದ ವಿನಯ್ ಕುಲಕರ್ಣಿಗೆ ಟಿಕೆಟ್‌

ಧಾರವಾಡ: ಕಾಂಗ್ರೆಸ್ ಗುರುವಾರ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಹೆಸರನ್ನು ಅಂತಿಮಗೊಳಿಸಿದೆ.

ಯೋಗೀಶ್ ಗೌಡ ಬರ್ಬರ ಕೊಲೆ ಪ್ರಕರಣದ ಆರೋಪಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಪ್ರಕರಣದ ವಿಚಾರಣೆ ಅಂತಿಮಗೊಳ್ಳುವ ಮೊದಲೇ ಕಾಂಗ್ರೆಸ್‌ ಟಿಕೆಟ್‌ ನೀಡಿರುವುದು ಕುತೂಹಲಕ್ಕೆ ಕಾರಣ ವಾಗಿದೆ.

ಧಾರಾವಾಡ ಸ್ಥಳೀಯ ನ್ಯಾಯಾಲಯದಲ್ಲಿ ಯೋಗೀಶ್ ಗೌಡ ಹತ್ಯೆ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶದ ಬಗ್ಗೆ ಈವರೆಗೂ ನ್ಯಾಯಾಲಯ ತೀರ್ಪು ನೀಡಿಲ್ಲ. ಕೊಲೆ ಪ್ರಕರಣದ ಆರೋಪ ಎದುರಿಸುತ್ತಿರುವ ವಿನಯ್ ಕುಲಕರ್ಣಿ ಧಾರವಾಡ ಪ್ರವೇಶ, ಕಾನೂನಾತ್ಮಕವಾಗಿ ತೀರ್ಮಾನ ಅಂತಿಮ ಗೊಂಡಿಲ್ಲ.

ಇನ್ನೇನು ಕೆಲವೇ ದಿನಗಳಲ್ಲಿ ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶದ ಬಗ್ಗೆ ನ್ಯಾಯಾಲಯದ ತೀರ್ಪು ಹೊರ ಬೀಳಲಿದ್ದು, ಒಂದು ವೇಳೆ ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶ ಸಿಕ್ಕರೆ ಧಾರವಾಡ ಗ್ರಾಮೀಣ ಕ್ಷೇತ್ರದ ರಾಜಕೀಯ ರಣಕಣ ಮತ್ತಷ್ಟು ರಂಗೇರಲಿದೆ.

ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶ ಸಿಗದಿದ್ದರೆ, ಮಾಜಿ ಸಚಿವ ವಿನಯ್‌ ಕುಲಕರ್ಣಿ ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ.

error: Content is protected !!