Saturday, 27th April 2024

ಮೂರು ದಿನ ಭಾರೀ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್

ಬೆಂಗಳೂರು : ರಾಜ್ಯದಲ್ಲಿ ಸೋಮವಾರದಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ನ.16 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.

ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಯಲ್ಲಿ ಇಂದು ಮತ್ತು ನ.16 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ತುಮಕೂರು, ದಾವಣಗೆರೆ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

error: Content is protected !!