Saturday, 10th April 2021

ರಾಸಲೀಲೆ ಪ್ರಕರಣ: ರಮೇಶ್ ಜಾರಕಿಹೊಳಿಗೆ ’ಸುಮೋಟು’ ಕಗ್ಗಂಟು

ಬೆಂಗಳೂರು : ಸಚಿವ ಸ್ಥಾನ ಕಳೆದುಕೊಂಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಕನ್ನಡ ರಕ್ಷಣಾ ವೇದಿಕೆ ಹಾಗೂ ವಕೀಲರು ನೀಡಿದ್ದ ದೂರನ್ನು ಆಧರಿಸಿ, ರಾಜ್ಯ ಮಹಿಳಾ ಆಯೋಗವು ರಮೇಶ್ ಜಾರಕಿಹೊಳಿ ವಿರುದ್ಧ ಸುಮೋಟು ಕೇಸ್ ದಾಖಲಿಸಿಕೊಂಡಿದೆ.

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಅವರು, ಕನ್ನಡ ರಕ್ಷಣಾ ವೇದಿಕೆ ಹಾಗೂ ವಕೀಲರೊಬ್ಬರು ಸಂತ್ರಸ್ಥೆಯನ್ನು ಕರೆದು ಹೇಳಿಕೆ ಪಡೆಯುವಂತೆ ದೂರು ನೀಡಿದ್ದಾರೆ. ಪೊಲೀಸ್ ತನಿಖೆಯೂ ನಡೆಯಲಿ, ನಾವು ಪೊಲೀಸರಿಗೆ ಸಹಕರಿಸುತ್ತೇವೆ. ಸಂತ್ರಸ್ತೆ ಯಾವುದೇ ಭಯಪಡುವ ಅವಶ್ಯಕತೆ ಇಲ್ಲ. ಅವರ ಪರವಾಗಿ ರಾಜ್ಯ ಮಹಿಳಾ ಆಯೋಗವಿದೆ ಎಂಬುದಾಗಿ ತಿಳಿಸಿದರು.

ಹೀಗಾಗಿ ಸಂತ್ರಸ್ತೆಯ ಹೇಳಿಕೆ ಪಡೆಯಲು ಪೊಲೀಸರ ಜೊತೆಗೆ, ರಾಜ್ಯ ಮಹಿಳಾ ಆಯೋಗ ಕೂಡ ಮುಂದಾಗಿದೆ.

Leave a Reply

Your email address will not be published. Required fields are marked *