Friday, 12th August 2022

ಮಾಜಿ ಕ್ರಿಕೆಟಿಗ ಸುರೇಶ್ ರೈನಾಗೆ ಪಿತೃವಿಯೋಗ

ಲಖನೌ: ಭಾರತದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ತಂದೆ ತ್ರಿಲೋಕಚಂದ್ ರೈನಾ ದೀರ್ಘ ಕಾಲದ ಅನಾರೋಗ್ಯದ ಹಿನ್ನೆಲೆಯಲ್ಲಿ ಭಾನುವಾರ ನಿಧನರಾದರು.

ಕಳೆದ ಒಂದು ವರ್ಷದಿಂದ ಕ್ಯಾನ್ಸರ್ ನೊಂದಿಗೆ ಹೋರಾಡುತ್ತಿದ್ದರು. ಹರ್ಭಜನ್ ಸಿಂಗ್ ಸೇರಿ ದಂತೆ ರೈನಾ ತಂಡದ ಆಟಗಾರರು ಸಾಮಾಜಿಕ ಮಾಧ್ಯಮಗಳಲ್ಲಿ ಸಂತಾಪ ಸೂಚಿಸಿದ್ದಾರೆ.

ಮಾಜಿ ಕ್ರಿಕೆಟಿಗ ಸುರೇಶ್ ರೈನಾ, ವೃತ್ತಿಪರ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ್ದು, ಸದ್ಯ ಐಪಿಎಲ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.