ಪುತ್ತೂರು: ಬೆಂಗಳೂರು ನಗರ ಪೊಲೀಸ್ ಕಮೀಷನರ್ ಕಮಲ್ ಪಂತ್ ಅವರು, ಎಸ್.ಜೆ.ಪಾರ್ಕ್ ಪೊಲೀಸ್ ಠಾಣೆಯಲ್ಲಿ ವೃತ್ತ ನಿರೀಕ್ಷಕರಾಗಿದ್ದ ಯೋಗೀಶ್ ಕುಮಾರ್ ರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಅಡಿಕೆ ಉದ್ಯಮಿಯೋರ್ವರ ದರೋಡೆ ಪ್ರಕರಣದಲ್ಲಿ ಡೀಲ್ ನಡೆಸಿ ಎಸ್.ಐ.ಯವರಿಂದ ಆರು ಲಕ್ಷ ರೂ ಲಂಚ ಪಡೆದ ಆರೋಪದಡಿ ಪೊಲೀಸ್ ಕಮೀಷನರ್ ಕಮಲ್ ಪಂತ್ ಯೋಗೀಶ್ ರವರನ್ನು ಅಮಾನತು ಮಾಡಿ ಆದೇಶ ಮಾಡಿದ್ದಾರೆ. ಯೋಗೀಶ್ ಪರಾರಿಯಾಗಿದ್ದು ಅವರಿಗಾಗಿ ಶೋಧ ನಡೆಯುತ್ತಿದೆ. ಮಡಿಕೇರಿಯವರಾದ ಯೋಗೀಶ್ ರವರು ಪುತ್ತೂರಿನ ಪ್ರತಿಷ್ಠಿತ ಕಾಲೇಜೊಂದರ ಹಳೆ ವಿದ್ಯಾರ್ಥಿ ಆಗಿದ್ದರು. […]
ಬೆಂಗಳೂರು: ಬೆಂಗಳೂರು ಪೊಲೀಸರ ಇತಿಹಾಸದಲ್ಲೇ ಬೃಹತ್ ಪ್ರಮಾಣದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಮೊದಲ ಬಾರಿಗೆ ದೊಡ್ಡ ಮಟ್ಟದ ಗಾಂಜಾ ಸೀಜ್ ಮಾಡಲಾಗಿದ್ದು, ಅದು 1350 ಕೆಜಿ ಆಗಿದೆ ಎಂದು...