Wednesday, 29th June 2022

ಕಾರು ಅಪಘಾತ: ಮಾಜಿ ಸಚಿವ ಯು.ಟಿ.ಖಾದರ್ ಪ್ರಾಣಾಪಾಯದಿಂದ ಪಾರು

ದಾವಣಗೆರೆ : ದಾವಣಗೆರೆ ಜಿಲ್ಲೆಯ ಆನಗೋಡು ಗ್ರಾಮದ ಬಳಿ ಮಾಜಿ ಸಚಿವ ಯು.ಟಿ.ಖಾದರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಖಾದರ್ ಅವರು ದಾವಣಗೆರೆಯಿಂದ ಬೆಂಗಳೂರಿನತ್ತ ಪ್ರಯಾಣ ಬೆಳೆಸುತ್ತಿದ್ದ ವೇಳೆ ಕಾರು ಮುಂದೆ ಹೋಗುತ್ತಿದ್ದ ಕಂಟೇನರ್ ಗೆ ಡಿಕ್ಕಿ ಹೊಡೆದಿದೆ. ಅದೃಷ್ಟ ವಶಾತ್ ಪ್ರಾಣಹಾನಿಯಾಗಿಲ್ಲ. ಕಾರು ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಳಿಕ ಖಾದರ್ ಅವರು ಮತ್ತೊಂದು ಕಾರಿನ ಮೂಲಕ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಯಲ್ಲಿ ಅಪಘಾತ ನಡೆದಿದೆ.

ಮುಂದೆ ಓದಿ

ದಾಖಲೆ ಇಲ್ಲದ ಕೋಟ್ಯಂತರ ರುಪಾಯಿ ಬೇನಾಮಿ ಹಣ ಪತ್ತೆ: ಮೂವರು ವಶಕ್ಕೆ

ದಾವಣಗೆರೆ: ದಾಖಲೆ ಇಲ್ಲದ ಸಾಗಿಸುತ್ತಿದ್ದ ಕಂತೆ ಕಂತೆ ನೋಟುಗಳ ಕೋಟ್ಯಂತರ ರುಪಾಯಿ ಬೇನಾಮಿ ಹಣ ಪತ್ತೆಯಾ ಗಿದ್ದು, ದಾವಣಗೆರೆಯ ಅಜಾದ್ ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ....

ಮುಂದೆ ಓದಿ