Saturday, 27th July 2024

ಚುಂಬಿಸುತ್ತಿರುವ ವಿಡಿಯೋ ವೈರಲ್: ಅಪ್ರಾಪ್ತರ ವಶ

ಮಂಗಳೂರು: ಇಬ್ಬರು ವಿದ್ಯಾರ್ಥಿಗಳು ಚುಂಬಿಸುತ್ತಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಪ್ರಕರಣಕ್ಕೆ ಸಂಬಂಧಿಸಿ ನಗರದ ಕಾಲೇಜಿನ 8 ಅಪ್ರಾಪ್ತ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಮಂಗಳೂರಿನ ಸೆಂಟ್ ಅಲೋಶಿಯಸ್ ಕಾಲೇಜಿನ ಎಂಟು ಹದಿಹರೆಯದವರನ್ನು ವಶಕ್ಕೆ ತೆಗೆದುಕೊಂಡು ಬಾಲಾಪರಾಧಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ವೈರಲ್ ಆಗಿದ್ದ ಕಿಸ್ಸಿಂಗ್ ವಿಡಿಯೋವನ್ನು ಆರು ತಿಂಗಳ ಹಿಂದೆ ಚಿತ್ರೀಕರಿಸ ಲಾಗಿದ್ದು, ಇತ್ತೀಚೆಗೆ ಅಪ್‌ಲೋಡ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವೀಡಿಯೊದಲ್ಲಿ ಕಂಡುಬರುವ ಹುಡುಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ. ಹುಡುಗರ ಪರಿಚಯವಿತ್ತು. […]

ಮುಂದೆ ಓದಿ

error: Content is protected !!