ರಾಯಚೂರು: ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸೋಮವಾರ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ನಾಮಪತ್ರ ಸಲ್ಲಿಸಿದರು. ಸಮಾಜ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ಈ ಸಮಯದಲ್ಲಿ ಉಪಸ್ಥಿತರಿದ್ದರು. ಏಪ್ರಿಲ್ 17ರಂದು ಮತದಾನ ನಡೆಯಲಿದ್ದು, ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ. ಸಚಿವ ಬಿ. ಶ್ರೀರಾಮುಲು ಈ ಕುರಿತು ಟ್ವೀಟ್ ಮಾಡಿ, ಮಸ್ಕಿ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ನಾಮಪತ್ರ ಸಲ್ಲಿಸುವ ವೇಳೆ ಉಪಸ್ಥಿತನಿದ್ದೆ” ಎಂದು ಹೇಳಿದ್ದಾರೆ. ಉಪ […]