ಸರ್ಬಿಯಾ: ಕಾಮನ್ ವೆಲ್ತ್ ಮತ್ತು ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಮತ್ತು ಒಲಿಂಪಿಕ್ ಕಂಚಿನ ಪದಕ ವಿಜೇತ ಬಜರಂಗ್ ಪೂನಿಯಾ ವಿಶ್ವ ಕುಸ್ತಿ ಚಾಂಪಿಯನ್ ಶಿಪ್ 2022ರ ಅಂತಿಮ ದಿನ ಪುರುಷರ 65 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಪ್ರೀ ಕ್ವಾರ್ಟರ್ ಫೈನಲ್ ನಲ್ಲಿ ಗಾಯಗೊಂಡ ಕಾರಣ ತಲೆಗೆ ಬ್ಯಾಂಡೇಜ್ ಹಾಕಿಕೊಂಡಿದ್ದ ಬಜರಂಗ್, ಪಂದ್ಯದ ಆರಂಭದಲ್ಲಿ 6-0 ಅಂತರದಲ್ಲಿ ಹಿನ್ನಡೆ ಅನುಭವಿಸಿದ ನಂತರ ಪೋರ್ಟೊ ರಿಕೊದ ಸೆಬಾಸ್ಟಿಯನ್ ರಿವೇರಾ ವಿರುದ್ಧ ಉತ್ಸಾಹಭರಿತ ಹೋರಾಟ ನಡೆಸಿದರು. […]