Friday, 24th September 2021

ಎರಡು ತಿಂಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ನಡೆಸಿ

ಧಾರವಾಡ: ಎರಡು ತಿಂಗಳೊಳಗೆ ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಧಾರವಾಡ ಹೈಕೋರ್ಟ್ ಪೀಠ  ಆದೇಶ ನೀಡಿದೆ.

2021 ರ ಮೇ 9 ರಂದು ನಡೆಯಬೇಕಿದ್ದ ಕಸಾಪ ಚುನಾವಣೆಯನ್ನು ಕರೋನಾ ಹೆಚ್ಚಳದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ ಸೋಂಕು ತಗ್ಗಿದ್ದು, ಮೂರು ಪಾಲಿಕೆ ಚುನಾವಣೆಗಳೂ ನಡೆದಿವೆ. ಕಸಾಪ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಶೇಖರಗೌಡ ಮಾಲಿ ಪಾಟೀಲ್​ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿ, ನ್ಯಾಯಾಲಯ ಈ ಸೂಚನೆ ನೀಡಿದೆ.

ಒಂದೂವರೆ ತಿಂಗಳ ಹಿಂದೆಯೇ ಸರಕಾರಕ್ಕೆ ಚುನಾವಣೆ ನಡೆಸುವಂತೆ ಮನವಿ ಸಲ್ಲಿಸಿದ್ದರೂ, ಸರ್ಕಾರದಿಂದ ಯಾವುದೇ ಸ್ಪಂದನೆ ಬಂದಿಲ್ಲ ಎಂದು ಮಾಲಿ ಪಾಟೀಲ್ ಹೇಳಿದ್ದರು. ಅವರ ಅರ್ಜಿಯನ್ನು ಪುರಸ್ಕರಿಸಿದ ಹೈಕೋರ್ಟ್, 2 ತಿಂಗಳಲ್ಲಿ ಕಸಾಪ ಚುನಾವಣೆ ನಡೆಸುವಂತೆ ಆದೇಶ ಹೊರಡಿಸಿದೆ.

Leave a Reply

Your email address will not be published. Required fields are marked *