Saturday, 10th April 2021

ತ.ನಾಡು ವಿಧಾನಸಭೆ ಚುನಾವಣೆ: ಎಡಪ್ಪಾಡಿಯಿಂದ ಸಿಎಂ ಪಳನಿಸ್ವಾಮಿ ಕಣಕ್ಕೆ

ಚೆನ್ನೈ: ಎಐಎಡಿಎಂಕೆ ಪಕ್ಷವು ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ.

ಆರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಬಿಡುಗಡೆ ಮಾಡಲಾಗಿದೆ. ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಎಡಪ್ಪಾಡಿಯಿಂದ ಹಾಗೂ ಉಪಮುಖ್ಯಮಂತ್ರಿ ಒ.ಪನ್ನೀರ್‌ಸೆಲ್ವಂ ಅವರು ಬೊಡಿನಾಯಕ್ಕನೂರ್‌ನಿಂದ ಸ್ಪರ್ಧಿಸಲಿದ್ದಾರೆ.

ತಮಿಳುನಾಡು ವಿಧಾನಸಭೆ ಚುನಾವಣೆ ಏಪ್ರಿಲ್ 6ರಂದು ಒಂದೇ ಹಂತದಲ್ಲಿ ನಡೆಯಲಿದೆ. ಕನ್ಯಾಕುಮಾರಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯೂ ಅಂದೇ ನಡೆಯಲಿದೆ. ಮೇ 2ರಂದು ಮತ ಎಣಿಕೆ ನಡೆಯಲಿದೆ.

Leave a Reply

Your email address will not be published. Required fields are marked *