Saturday, 16th January 2021

ಇದು ಬೆಂಗಳೂರು ಬೆಳಗಾವಿ ಕ್ಯಾಬಿನೆಟ್: ರೇಣುಕಾಚಾರ್ಯ ಆಕ್ರೋಶ

ಬೆಂಗಳೂರು: ಸಚಿವ ಸ್ಥಾನ ವಂಚಿತರಾಗಿದ್ದಕ್ಕೆ ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೇರ, ನಿಷ್ಟುರ ಮಾತುಗಳೇ ನನಗೆ ಮುಳುವಾಯಿತು. ಲಾಬಿ ಮಾಡಿದವರು ಸಚಿವರಾಗುತ್ತಾರೆ. ವೈಯಕ್ತಿಕವಾಗಿ ನನಗೆ ಬೇಸರವಾಗಿದೆ. ನಾನು ಯಾವುದೇ ಲಾಬಿ ಮಾಡಲಿಲ್ಲ.‌ ಅದು ನನ್ನ ಸ್ವಯಂಕೃತ ಅಪರಾಧ. ಮಂತ್ರಿಗಿರಿ ಕೊಡಿ ಎಂದು ಯಾರಿಗೂ ನಾನು ಅರ್ಜಿ ಹಾಕಲ್ಲ ಎಂದು ರೇಣುಕಾಚಾರ್ಯ ಹೇಳಿದರು.

ಇದು ಬೆಂಗಳೂರು ಬೆಳಗಾವಿ ಕ್ಯಾಬಿನೆಟ್ ಆಗಿದೆ. ಮಧ್ಯ ಕರ್ನಾಟಕಕ್ಕೆ ಅನ್ಯಾಯವಾಗಿದೆ. ನನಗೆ ಬೇಸರವಾಗಿದೆ. ನಾವು ಯಾರ ಮುಂದೆ ಆಸಮಾಧಾನ ಹೇಳಿಕೊಳ್ಳಬೇಕು.‌ ಸ್ವಾಭಿಮಾನ ಬಿಟ್ಟು ಬದುಕುವ ವ್ಯಕ್ತಿ ನಾನಲ್ಲ.‌ ಕ್ಷೇತ್ರದ ಜನ ಹೇಳಿದಂತೆ ಕೇಳುವ ವ್ಯಕ್ತಿ ನಾನು.‌ ಯಾರ ಬಳಿಯೂ ಲಾಬಿ ಮಾಡುವ ಹವ್ಯಾಸವಿಲ್ಲ ಎಂದು ಪ್ರತಿಕ್ರಿಯಿಸಿದರು.

Leave a Reply

Your email address will not be published. Required fields are marked *