Wednesday, 29th June 2022

ಇಂದು ಸಿಎಂ ಬಿಎಸ್’ವೈ ಮಹತ್ವದ ಸಭೆ: ಪ್ಯಾಕೇಜ್ ನಿರೀಕ್ಷೆ ?

ಬೆಂಗಳೂರು : ರಾಜ್ಯದಲ್ಲಿ ಕರೋನಾ ನಿಯಂತ್ರಣಕ್ಕೆ ಲಾಕ್ ಡೌನ್ 3.0 ಜಾರಿಯಾದ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಜೊತೆಗೆ ಮಹತ್ವದ ಸಭೆ ನಡೆಸಲಿದ್ದಾರೆ.

ಅಧಿಕೃತ ನಿವಾಸ ಕಾವೇರಿಯಲ್ಲಿ ಸಭೆ ನಡೆಯಲಿದ್ದು, ಕೋವಿಡ್ ಉಸ್ತುವಾರಿ ಸಚಿವರಾದ ಡಿಸಿಎಂ ಡಾ.ಅಶ್ವತ್ಥ ನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಚಿವ ಡಾ. ಸುಧಾಕರ್, ಆರ್. ಅಶೋಕ್, ಅರವಿಂದ ಲಿಂಬಾವಳಿ , ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಸಭೆಯಲ್ಲಿ ಲಾಕ್ ಡೌನ್ ಪರಿಸ್ಥಿತಿ ಅವಲೋಕಿಸಿ, ಲಾಕ್ ಡೌನ್ ಹಿನ್ನೆಲೆಯಲ್ಲಿ ಮತ್ತಷ್ಟು ವರ್ಗಗಳಿಗೆ ಪರಿಹಾರ ಪ್ಯಾಕೇಜ್ ಘೋಷಣೆ ಕುರಿತಂತೆ ಚರ್ಚೆಯಾಗಲಿದೆ ಎಂದು ಹೇಳಲಾಗುತ್ತಿದೆ.