ತುಮಕೂರು: ತುರುವೇಕೆರೆ ಶಾಸಕ ಮಸಾಲೆ ಜಯರಾಮ್ ಅವರ ಮಗ ತೇಜ್ ಜಯರಾಮ್ ಅವರ ಮೇಲೆ ದುಷ್ಕರ್ಮಿಗಳು ಅಟ್ಯಾಕ್ ಮಾಡಿ ಹತ್ಯೆ ಮಾಡಲು ಯತ್ನಿಸಿರುವ ಘಟನೆ ನಡೆದಿದೆ.
ಗುಬ್ಬಿ ತಾಲೂಕಿನ ನೆಟ್ಟಿಕೆರೆ ಕ್ರಾಸ್ ಬಳಿ ತೇಜ್ ಕಪಾಳಕ್ಕೆ ಹೊಡೆದು ಮಚ್ಚಿ ನಿಂದ ಹಲ್ಲೆ ಮಾಡಲು ಮುಂದಾದಾಗ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ಹೋಗಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಕೃತ್ಯಕ್ಕೆ ಬಳಸಿದ್ದ ಕಾರು, ಲಾಂಗ್, ಮಚ್ಚು, ಕಾರದಪುಡಿ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡು, ಕೆಲವರನ್ನು ಬಂಧಿಸಿದ್ದಾರೆ. ಸಿ.ಎಸ್.ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಲ್ಲೆ ನಡೆಸಿರುವವರು ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಬೆಂಬಲಿಗರು ಎಂಬ ಆರೋಪ ಕೇಳಿಬಂದಿದೆ. ಹೆಚ್ಚಿನ ಮಾಹಿತಿ ಪೊಲೀಸರ ತನಿಖೆಯಿಂದ ಹೊರಬರಬೇಕಿದೆ.