Friday, 3rd February 2023

ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್’ನಲ್ಲಿ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಬೆಂಗಳೂರು: ನಗರದ ಬೊಮ್ಮನಹಳ್ಳಿ ಸಮೀಪದ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಕಾರು ಮತ್ತು ಬೈಕ್ ಡಿವೈಡರ್ ಗುದ್ದಿ ಅಪಘಾತ ಸಂಭವಿಸಿ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ.

ಓವರ್ ಟೇಕ್ ಮಾಡಲು ಹೋಗಿ ಅಪಘಾತವಾಗಿದ್ದು, ಫ್ಲೈ ಓವರ್ ಮೇಲಿಂದ ಯುವಕ ಹಾಗೂ ಯುವತಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಡಿಕ್ಕಿಯ ರಭಸಕ್ಕೆ ದೇಹಗಳು ಕೆಳಗೆ ಬಿದ್ದು ಛಿದ್ರವಾಗಿವೆ.

ಫ್ಲೈ ಓವರ್ ಮೇಲೆ ಕಾರು ಕೂಡ ನುಜ್ಜುಗುಜ್ಜಾಗಿದ್ದು, ಬೈಕ್ ಸವಾರರು ಬಲಿಯಾಗಿದ್ದಾರೆ. ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ನೀಡಿದ್ದು, ಅಪಘಾತ ವಾದ ಸ್ಥಳ, ವಾಹನಗಳ ಪರಿಶೀಲನೆ ನಡೆಸಿದ್ದಾರೆ.

ಕಾರಿನಲ್ಲಿದ್ದವನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಯುವಕ- ಯುವತಿಗೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈ ಓವರ್ ಮೇಲೆ ಅಳವಡಿಸಿದ್ದ ಬ್ಯಾರಿಕೇಡ್ ಸಮೇತ ಯುವಕ ಹಾಗೂ ಯುವತಿ ಕೆಳಗೆ ಬಿದ್ದಿದ್ದಾರೆ.

ಎರಡು ವರ್ಷಗಳ ಹಿಂದೆ ಇದೇ ಮಾದರಿಯಲ್ಲಿ ಸ್ಕೂಟರ್ ಸಮೇತ ಸವಾರರು ಬಿದ್ದು ಮೃತಪಟ್ಟಿದ್ದರು.

error: Content is protected !!