Wednesday, 19th February 2020

ಮಳೆಯಲಿ… ಜೊತೆಯಲಿ…

* ನೆರೆ ಪ್ರದೇಶದಲ್ಲೇ ಮುಖ್ಯಮಂತ್ರಿ ಮೊಕ್ಕಾಂ
* ಇನ್ಫೋಸಿಸ್‍ನಿಂದ 10 ಕೋಟಿ ನೆರವು
* ಮಹಾರಾಷ್ಟ್ರದಿಂದ ಮತ್ತೆ ಐದು ಲಕ್ಷ ಕ್ಯುಸೆಕ್ ನೀರು

ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ಭಾರಿ ಪ್ರವಾಹ ಸದ್ಯಕ್ಕೆ ಕೊನೆಯಾಗುವ ಲಕ್ಷಣ ಕಾಣುತ್ತಿಲ್ಲ. ಇನ್ನೆರೆಡು ಕೃಷ್ಣಾ ನದಿ ಭಾಗದಲ್ಲಿ ಭಾರಿ ಮಳೆಯಾಗುವ ಮುನ್ನೆಚರಿಕೆಯನ್ನು ಹವಾಮಾನ ಇಲಾಖೆ ನೀಡಿದ್ದು, ಇದರೊಂದಿಗೆ ಮಹಾರಾಷ್ಟ್ರ ಮತ್ತೆ ಐದು ಲಕ್ಷ ಕ್ಯುಸೆಕ್ ಬಿಡುಗಡೆಗೊಳಿಸಿರುವುದಾಗಿ ಹೇಳಿರುವುದು ಆತಂಕಕ್ಕೆ ಕಾರಣವಾಗಿದೆ.
ಬೆಳಗಾವಿ ಹಾಗೂ ಪ್ರವಾಹ ಪೀಡಿತ ಪ್ರದೇಶದಲ್ಲಿ ಬುಧವಾರದಿಂದ ಮೊಕ್ಕಾಂ ಹೂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಗುರುವಾರವೂ ಹಲವು ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ, ರಕ್ಷಣಾ ಕಾರ್ಯದ ಬಗ್ಗೆ ಮಾಹಿತಿ ಪಡೆದರು. ನೀರಿನ ಮಟ್ಟ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ, ಜನರಿಗೆ ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಎಚ್ಚರವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇನ್ಫೋಸಿಸ್‍ನಿಂದ ಸಹಾಯ ಹಸ್ತ

ಪ್ರವಾಹದಿಂದಾಗಿರುವ ಅವ್ಯವಸ್ಥೆಯನ್ನು ಸರಿಪಡಿಸಲು ಸುಮಾರು ಐದು ಸಾವಿರ ಕೋಟಿ ರು. ಅಗತ್ಯವಿದೆ ಎಂದು ಮುಖ್ಯಮಂತ್ರಿ ಯಡಿಯೂಪ್ಪರ ಅವರು ಹೇಳುತ್ತಿದ್ದಂತೆ, ಇನ್ಫೋಸಿಸ್ ಫೌಂಡೇಷನ್ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 10 ಕೋಟಿ ರು. ನೀಡುವುದಾಗಿ ಘೋಷಿಸಿದ್ದಾರೆ. ಇದರೊಂದಿಗೆ ಪ್ರವಾಹ ಪೀಡಿತ ಪ್ರದೇಶದಲ್ಲಿ ಅಗತ್ಯವಿರುವ ಸಾಮಗ್ರಿಗಳ ಕಿಟ್ ನೀಡುವ ಭರವಸೆಯನ್ನೂ ನೀಡಿದ್ದಾರೆ. ಇನ್ಫೋಸಿಸ್ ಫೌಂಡೇಷನ್ ಅಧ್ಯಕ್ಷೆ ಸುಧಾಮೂರ್ತಿ ಅವರ ಈ ನಿರ್ಧಾರವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಸ್ವಾಗತಿಸಿದ್ದಾರೆ.
ರಕ್ಷಣಾ ಕಾರ್ಯದಲ್ಲಿ ಯುವ ಬ್ರಿಗೇಡ್: ಉತ್ತರ ಕರ್ನಾಟಕ ಭಾಗದಲ್ಲಿರುವ ಪ್ರವಾಹ ಪರಿಸ್ಥಿತಿ ನಿಯಂತ್ರಿಸಲು ಹಲವು ಸಂಘ ಸಂಸ್ಥೆಗಳು ಈಗಾಗಲೇ ಕಾರ್ಯಾರಂಭ ಮಾಡಿವೆ. ಗುರುವಾರದಿಂದ ಚಕ್ರವರ್ತಿ ಸೂಲಿಬೆಲೆ ಅವರ ನೇತೃತ್ವದಲ್ಲಿ ಯುವ ಬ್ರಿಗೇಡ್, ಕೃಷ್ಣಾ ನದಿ ಭಾಗದ ಹಳ್ಳಿಗಳನ್ನು ತಲುಪಿದ್ದು ನೆರೆ ಸಂತ್ರಸ್ತರಿಗೆ ನೆರವಾಗುತ್ತಿದ್ದಾರೆ.

Leave a Reply

Your email address will not be published. Required fields are marked *