Wednesday, 21st October 2020

ಪರಿಹಾರ ಕಾರ್ಯಾಚರಣೆಗೆ ಡಿಸಿಗಳ ಪಿಡಿ ಖಾತೆ, ಎನ್.ಡಿ.ಆರ್.ಎಫ್ ನಿಧಿ ಬಳಸಲು ಸೂಚನೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಶುಕ್ರ ವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದರು.

ಸಭೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ, ರಾಜ್ಯದ ನೆರೆಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯಾಚರಣೆಗೆ ಆಯಾ ಜಿಲ್ಲಾಧಿ ಕಾರಿಗಳ ಪಿಡಿ ಖಾತೆ ಮತ್ತು ಎನ್ ಡಿಆರ್ ಎಫ್ ನಲ್ಲಿರುವ ನಿಧಿ ಬಳಸುವಂತೆ ಸೂಚನೆ ನೀಡಿದ್ದಾರೆ.

ಉತ್ತರ ಕರ್ನಾಟಕದ ಕಲಬುರಗಿ, ರಾಯಚೂರು, ಯಾದಗಿರಿ, ಬೀದರ್, ಧಾರವಾಡ, ಕೊಪ್ಪಳ ಸೇರಿದಂತೆ ಮಳೆ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಎಸ್ ಪಿಗಳು, ಜಿಲ್ಲಾ ಪಂಜಾಯತ್ ಸಿಇಒ, ಸಿ.ಎಸ್.ವಿಜಯಭಾಸ್ಕರ್, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ವಿಪತ್ತು ನಿರ್ವಹಣಾ ಅಧಿಕಾರಿಯಾಗಲು ಭಾಗಿಯಾಗಿದ್ದಾರೆ.

Leave a Reply

Your email address will not be published. Required fields are marked *