Friday, 27th May 2022

ಯುವತಿಗೆ ರಕ್ಷಣೆ ನೀಡಲು ನಾವು ಬದ್ದರಾಗಿದ್ದೇವೆ, ಇದಕ್ಕೆ ಹಿಂದೇಟು ಹಾಕೋದಿಲ್ಲ: ಶಶಿಕಲಾ ಜೊಲ್ಲೆ

ಬೆಂಗಳೂರು: ಸಿಡಿ ಪ್ರಕರಣದ ಯುವತಿಗೆ ರಕ್ಷಣೆ ನೀಡಲು ನಾವು ಬದ್ದರಾಗಿದ್ದೇವೆ, ಇದಕ್ಕೆ ಹಿಂದೇಟು ಹಾಕೋದಿಲ್ಲ. ರಕ್ಷಣೆ ನೀಡೋದು ನಮ್ಮ ಜವಾಬ್ದಾರಿ ಎಂದು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ವಿಕಾಸಸೌಧದಲ್ಲಿ ಮಾತನಾಡಿದ ಸಚಿವರು, ನಮ್ಮ ಸರ್ಕಾರ ಆ ಯುವತಿಗೆ ರಕ್ಷಣೆ ನೀಡೋದಾಗಿ ಸದನದಲ್ಲೇ ಹೇಳಿದೆ. ಗೃಹ ಸಚಿವ ಬೊಮ್ಮಾಯಿ ಮತ್ತು ಮುಖ್ಯಮಂತ್ರಿಗಳು ಆಕೆಗೆ ರಕ್ಷಣೆ ನೀಡುವುದಾಗಿ ಭರವಸೆ ನೀಡಿದ್ದಾರೆ. ನಮ್ಮಿಂದ ರಕ್ಷಣೆ ನೀಡುವ ಕೆಲಸ ಮಾಡುತ್ತೇವೆ’ ಎಂದರು.

ಹೆಣ್ಣು ಮಗಳಿಗೆ ರಕ್ಷಣೆ ಕೊಡೋದು ನಮ್ಮ ಕರ್ತವ್ಯ. ಹೀಗಾಗಿ ನಮ್ಮ ಸರ್ಕಾರ ಯುವತಿಗೆ ರಕ್ಷಣೆ ನೀಡುವಲ್ಲಿ ಸದಾ ಮುಂಚೂಣಿ ಯಲ್ಲಿರುತ್ತದೆ. ತನಿಖೆಯ ವರದಿ ಏನೇ ಬರಲಿ. ಯುವತಿಗೆ ರಕ್ಷಣೆ ನೀಡ್ತೇವೆ’ ಎಂದರು.