Thursday, 19th May 2022

ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಪತ್ತೆ

ಗುವಾಹಟಿ: ರಾಜ್ಯದ ದಿಫು ಎಂಬಲ್ಲಿ ಅರಣ್ಯಪ್ರದೇಶದಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಪತ್ತೆ ಯಾಗಿದೆ.

ಪೊಲೀಸರಿಂದ ವಶಪಡಿಸಿಕೊಳ್ಳಲಾದ ಶಸ್ತ್ರಾಸ್ತ್ರಗಳು ಕೆ ಡಿ ಎಲ್ ಎಫ್ ನಿಷೇಧಿತ ಸಂಘಟನೆಗೆ ಸೇರಿದ್ದು ಎನ್ನುವ ಶಂಕೆಯನ್ನು ವ್ಯಕ್ತಪಡಿಸಿದ್ದಾರೆ.

ದಿಫು ನಲ್ಲಿನ ಬೊಟಾನಿಕಲ್ ಗಾರ್ಡನ್ ಬಳಿಯ ಅರಣ್ಯಪ್ರದೇಶದಲ್ಲಿ ದುಷ್ಕರ್ಮಿಗಳು ಶಸ್ತ್ರಾಸ್ತ್ರ ಗಳನ್ನು ನೆಲದಡಿ ಹೂತು ಹಾಕಿದ್ದರು. ಖಚಿತ ಸುಳಿವಿನ ಆಧಾರದ ಮೇಲೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ ಸಂದರ್ಭ ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದವು.

ಘಟನೆಗೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಲಾಗಿಲ್ಲ, ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.