Tuesday, 26th October 2021

ಕರೋನಾ: ಚಾಮರಾಜನಗರದಲ್ಲಿ ಆ.30 ರವರೆಗೆ ವೀಕೆಂಡ್ ಕರ್ಫ್ಯೂ ವಿಸ್ತರಣೆ

ಚಾಮರಾಜನಗರ : ಕೇರಳ ರಾಜ್ಯದಲ್ಲಿ ಕರೋನಾ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳ ವಾಗುತ್ತಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಚಾಮರಾಜ ನಗರದಲ್ಲಿ ಆಗಸ್ಟ್ 30 ರ ಬೆಳಿಗ್ಗೆ 6 ಗಂಟೆ ತನಕ ವೀಕೆಂಡ್ ಕರ್ಫ್ಯೂ ವಿಸ್ತರಣೆ ಮಾಡಲಾಗಿದೆ.

ವಿಕೇಂಡ್ ಕರ್ಪ್ಯೂ ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ಆದೇಶ ಹೊರಡಿಸಿದ್ದು, ಚಿತ್ರಮಂದಿರ, ಸಿನಿಮಾ ಹಾಲ್, ಪಬ್ ಗಳಿಗೆ ಅವಕಾಶ ಇರುವುದಿಲ್ಲ, ತರಬೇತಿ ಉದ್ದೇಶ ಹೊರತುಪಡಿಸಿ ಸ್ವಿಮ್ಮಿಂಗ್ ಫೂಲ್ ಗಳಿಗೂ ನಿರ್ಬಂಧ ಹೇರಲಾಗಿದೆ. ಮದುವೆಗಳಿಗೆ ನೂರು ಜನರು ಹಾಗೂ ಅಂತ್ಯಕ್ರಿಯೆಗೆ 20 ಜನರು ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ.

ಜಿಲ್ಲೆಯ ಮಲೈ ಮಹದೇಶ್ವರ ಬೆಟ್ಟ, ಮುಜರಾಯಿ ಇಲಾಖೆ ಹಾಗೂ ಖಾಸಗಿ ಸೇರಿದಂತೆ ಎಲ್ಲಾ ದೇವಸ್ಥಾನ ಗಳಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ದರ್ಶನಕ್ಕೆ ಅವಕಾಶ ಇರಲಿದೆ.  ಶನಿವಾರ ಭಾನುವಾರ ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳಾದ ಭರಚುಕ್ಕಿ ಜಲಪಾತ, ಹೊಗೇನಕಲ್ ಜಲಪಾತಗಳಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ.

Leave a Reply

Your email address will not be published. Required fields are marked *