ಸತ್ಯಭಾಮ ಅವರು ಚಂದ್ರಶೇಖರ ಕಂಬಾರ ಅವರ ಪ್ರೇರಣಾ ಶಕ್ತಿಯಾಗಿದ್ದರು. ಹೀಗಾಗಿ ಅವರು ಸಾಹಿತ್ಯ ಕ್ಷೇತ್ರದಲ್ಲಿನ ಬೆಳವಣಿಗೆ ಕುರಿತು ಆಸಕ್ತಿ ಹೊಂದಿದ್ದರು. ಸತ್ಯಭಾಮ ಅವರ ಆತ್ಮಕ್ಕೆ ದೇವರು ಚಿರಶಾಂತಿ ನೀಡಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಕಂಬಾರ ಕುಟುಂಬದ ಸದಸ್ಯರಿಗೆ ನೀಡಲಿ ಎಂದು ಕೋರುತ್ತೇನೆ ಎಂದು ಕಂಬನಿ ಮಿಡಿದಿದ್ದಾರೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿಗಳಾದ ಡಾ. ಚಂದ್ರಶೇಖರ ಕಂಬಾರ ಅವರ ಪತ್ನಿ ಸತ್ಯಭಾಮ ಚಂದ್ರಶೇಖರ ಕಂಬಾರ ಅವರ ನಿಧನ ತೀವ್ರ ದುಃಖ ಉಂಟು ಮಾಡಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಕಂಬಾರರು, ಮತ್ತವರ ಕುಟುಂಬದ ಸದಸ್ಯರಿಗೆ ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.