Friday, 27th May 2022

ಅತ್ಯಾಚಾರ: ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವು

ಮುಂಬೈ: ನಿರ್ಭಯಾ ರೀತಿಯಲ್ಲಿ ಅತ್ಯಾಚಾರಕ್ಕೊಳಗಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದು ವರದಿಯಾಗಿದೆ.

ಮುಂಬೈನ ಸಾಕಿನಾಕಾ ಪ್ರದೇಶದಲ್ಲಿ 30 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕ ಆಕೆಯ ಗುಪ್ತಾಂಗಕ್ಕೆ ರಾಡ್​ ಹಾಕಿ, ತಲೆಗೆ ರಾಡ್​ನಿಂದ ಹೊಡೆದು ವಿಕೃತಿ ಮೆರೆದಿದ್ದನು.

ಘಟನೆ ಬಳಿಕ ಪರಾರಿಯಾಗಿದ್ದ ಆರೋಪಿ ಮೋಹನ್ ಚವ್ಹಾಣ್ (45)ನನ್ನು ಸಾಕಿನಾಕಾ ಪೊಲೀಸರು ಬಂಧಿಸಿದ್ದು, ವಿಚಾರಣೆ ಮುಂದುವರೆಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಂತ್ರಸ್ತ ಮಹಿಳೆ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಶುಕ್ರವಾರ ಬೆಳಗ್ಗೆ ಪೊಲೀಸರು ತೀವ್ರ ರಕ್ತಸ್ರಾವಕ್ಕೊಳಗಾಗಿದ್ದ ಮಹಿಳೆ ಯನ್ನು ರಾಜವಾಡಿ ಆಸ್ಪತ್ರೆಗೆ ದಾಖಲಿಸಿದ್ದರು.

ನಿರ್ಭಯಾ ಮಾದರಿಯ ಪ್ರಕರಣವೊಂದು ಮತ್ತೆ ವಾಣಿಜ್ಯ ನಗರಿ ಮುಂಬೈನಲ್ಲಿ ನಡೆದು ಹೋಗಿದೆ. ಮುಂಬೈನ ಸಾಕಿನಾಕಾ ಪ್ರದೇಶದ ಕೈರಾನಿ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಮಹಿಳೆಗೆ ಚಿತ್ರ ಹಿಂಸೆ ನೀಡಿ, ಬಳಿಕ ಆಕೆಯನ್ನು ಅತ್ಯಾ ಚಾರ ಎಸಗಿದ್ದಾನೆ. ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸುವಷ್ಟರಲ್ಲಿ ಕೃತ್ಯ ನಡೆದಿದೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆಯನ್ನು ಪೊಲೀಸರು ರಾಜವಾಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಇದೀಗ ನರಳಾಟದ ಬಳಿಕ ಸಂತ್ರಸ್ತೆ ಕೊನೆಯುಸಿರೆಳೆದಿದ್ದಾರೆ. ಮುಂಬೈ ಪೊಲೀಸರು ಮೋಹನ್ ಚೌಹಾಟ್ ಎಂಬ ಆರೋಪಿಯನ್ನು ಬಂಧಿಸಿದ್ದು, ಆತನನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.

ಡಿಸೆಂಬರ್ 2012ರಲ್ಲಿ ನಿರ್ಭಯಾ ಎಂದು ದೇಶದೆಲ್ಲೆಡೆ ಗೊತ್ತಿರುವ ಯುವತಿ ಮೇಲೆ ಚಲಿಸುತ್ತಿರುವ ಬಸ್‌ನಲ್ಲಿ ಕ್ರೂರಿಗಳ ಗುಂಪೊಂದು ಮಾರಣಾಂತಿಕ ಅತ್ಯಾ ಚಾರವೆಸಗಿ ಕಬ್ಬಿಣದ ರಾಡ್‌ನಿಂದ ಆಕೆ ಮೇಲೆ ಹಲ್ಲೆ ಮಾಡಿ ಕೊಂದಿರುವ ಘಟನೆ ಇಡೀ ದೇಶವನ್ನೇ ಆಕ್ರೋಶಕ್ಕೆ ಗುರಿಯಾಗುವಂತೆ ಮಾಡಿತ್ತು.