Tuesday, 21st March 2023

ಕ್ವಾರಂಟೈನ್ ಸಂದರ್ಭದಲ್ಲಿ ಸರಕಾರಿ ಕಾರ್ಯಕ್ಕೆ ಅಡತಡೆ ವಿರುದ್ಧ ಪ್ರಕರಣ

ವಿಜಯಪುರ:

ದೇಶದ ವಿವಿಧ ರಾಜ್ಯಗಳಿಂದ ಜಿಲ್ಲೆಗೆ ವಾಪಸ್ ಆಗುವ ಜನರನ್ನು ಕ್ವಾರಂಟೈನ್ ಮಾಡುವ ಸಂದರ್ಭದಲ್ಲಿ ಯಾರಾದರೂ ಅಡೆತಡೆ ಉಂಟುಮಾಡಿದ್ದಲ್ಲಿ ಅಂತಹವರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಎಚ್ಚರಿಕೆ ನೀಡಿದ್ದಾರೆ.

ಅದರಂತೆ ಈಚೆಗೆ ವಿಜಯಪುರ ತಾಲೂಕಿನ ಮಹಾಲ್ ಐನಾಪೂರ ತಾಂಡಾದಲ್ಲಿ ಬೇರೆ ರಾಜ್ಯಗಳಿಂದ ಹಲವಾರು ಜನರು ಆಗಮಿಸಿದ ಹಿನ್ನೆಲೆಯಲ್ಲಿ ಕ್ವಾರಂಟೈನ್ ಮಾಡಲು ಉದ್ದೇಶ ಹೊಂದಲಾಗಿ ಶಾಲೆಯಲ್ಲಿ ಕಡಿಮೆ ಸ್ಥಳಾವಕಾಶ ಇದ್ದುದರಿಂದ ಸಮುದಾಯ ಭವನವನ್ನು ಕ್ವಾರಂಟೈನ್‍ಗಾಗಿ ಪಡೆಯುವ ಸಂದರ್ಭದಲ್ಲಿ ಖಾಸಗಿ ಶಾಲಾ ಶಿಕ್ಷಕರೊಬ್ಬರು ಅಧಿಕಾರಿಗಳಿಗೆ ಅಡ್ಡಿಪಡಿಸುವ ಜೊತೆಗೆ ಪೊಲೀಸರ ಮೇಲೆ ಹಲ್ಲೆ ನಡೆಸಲು ಯತ್ನಿಸಿರುವುದರಿಂದ ಫೀರ್ಯಾದಿ ದಾಖಲಿಸಿ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಅದರಂತೆ ಐಪಿಸಿ 333 ರನ್ವಯ ಪ್ರಕರಣ ಸಹ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲೆಗೆ ಮಹಾರಾಷ್ಟ್ರ, ರಾಜಸ್ಥಾನ, ವಿವಿಧ ರಾಜ್ಯಗಳಿಂದ ಬಂದಿರುವವರನ್ನು ಗ್ರಾಮ ಮತ್ತು ನಗರ ಪ್ರದೇಶ ವ್ಯಾಪ್ತಿಯಲ್ಲಿ ಕ್ವಾರಂಟೈನ್‍ಗೆ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರದ ನಿಯಮಾವಳಿಯಂತೆ ಕೊರೋನಾ ರೋಗ ಹರಡದಂತೆ ಮುಂಜಾಗ್ರತೆ ವಹಿಸುವ ಉದ್ದೇಶದಿಂದ ಕ್ವಾರಂಟೈನ್ ಮಾಡಲಾಗುತ್ತಿದೆ. ಈಗ ಬೇರೆ ರಾಜ್ಯಗಳಿಂದ ಬರುತ್ತಿರುವ ಜನರು ನಮ್ಮವರೇ ಆಗಿರುವುದರಿಂದ ಕಡ್ಡಾಯವಾಗಿ ಕ್ವಾರಂಟೈನ್ ಮಾಡಿ ಕೋವಿಡ್-19 ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ತಪ್ಪುವೆಸಗದ ಜನರಿಗೆ ಈ ರೀತಿ ಕ್ವಾರಂಟೈನ್‍ಗೆ ಅಡ್ಡಿಪಡಿಸುವುದು ಸರಿಯಲ್ಲ. ಸಾರ್ವಜನಿಕರೆಲ್ಲರು ಬಂದ ಇಮತಹ ಜನರಿಗೆ ಅನುಕೂಲವಾಗಬೇಕು. ಹೊರತು ಅನಾನುಕೂಲವಾಗದಂತೆ ನೋಡಿಕೊಳ್ಳುವುದು ಅಷ್ಟೇ ಮುಖ್ಯವಾಗಿದ್ದು, ಕ್ವಾರಂಟೈನ್ ಸಂದರ್ಭದಲ್ಲಿ ಯಾವುದೇ ರೀತಿಯ ಅಡತಡೆ ಉಂಟುಮಾಡಿದ್ದಲ್ಲಿ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಇಂದು ಬುಧವಾರ ಸಂಜೆ ಕೋವಿಡ್-19 ರೋಗದಿಂದ ಗುಣಮುಖರಾದ ಒರ್ವ ಗರ್ಭಿಣಿ ಮಹಿಳೆಯನ್ನು ಜಿಲ್ಲಾಸ್ಪತ್ರೆಯಿಂದ ಬಿಡುಗಡೆಹೊಂದಿದ್ದು, 21 ವರ್ಷ ವಯೋಮಾನದ ಮಹಿಳೆ ರೋಗಿ ಸಂಖ್ಯೆ;401 ಬಿಡುಗಡೆ ಹೊಂದಿದ್ದಾರೆ. ಒಂಭತ್ತು ತಿಂಗಳ ತುಂಬು ಗರ್ಭಿಣಿಯಾಗಿದ್ದ ಈ ಮಹಿಳೆಗೆ ಪರಿಣಾಮಕಾರಿ ಚಿಕಿತ್ಸೆ ಮೂಲಕ ಗುಣಪಡಿಸಿರುವುದು ತಜ್ಞ ವೈದ್ಯರ ಸಾಧನೆಯಾಗಿದೆ. ಇನ್ನುಳಿದ 14 ಕೋವಿಡ್-19 ರೋಗಿಗಳ ಆರೋಗ್ಯ ಸ್ಥಿರವಾಗಿದ್ದು ಪರಿಣಾಮಕಾರಿ ಚಿಕಿತ್ಸೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

error: Content is protected !!