Sunday, 25th September 2022

ಡಿಎಲ್, ಎಲ್‍ಎಲ್ ಸೇವೆ ಸ್ಥಗಿತಗೊಳಿಸಿ ಆದೇಶ

ಯಾದಗಿರಿ:

ಜಿಲ್ಲೆಯಲ್ಲಿ ಇಬ್ಬರಿಗೆ ಕೋವಿಡ್-19 ಪಾಸಿಟಿವ್ ಸೋಂಕು ದೃಢಪಟ್ಟಿರುವುದರಿಂದ ಮುಂದೆ ಸಂಭವಿಸಬಹುದಾದ ಅನಾಹುತಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಪ್ರಾದೇಶಿಕ ಸಾರಿಗೆ ಇಲಾಖೆಯ ಸಾರ್ವಜನಿಕ ಸೇವೆಗಳಾದ ವಾಹನ ಕಲಿಕಾ ಚಾಲನಾ ಪರವಾನಗಿ (ಎಲ್‍ಎಲ್) ಮತ್ತು ವಾಹನ ಚಾಲನಾ ಪರವಾನಗಿ (ಡಿಎಲ್)ನ್ನು ಮಾತ್ರ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಆದೇಶ ಹೊರಡಿಸಿದ್ದಾರೆ.

ಆರ್.ಟಿ.ಓ ಕಚೇರಿಗೆ ಭೇಟಿ ನೀಡುವ ಸಾರ್ವಜನಿಕರು ಏಕಕಾಲದಲ್ಲಿ ಒಟ್ಟಿಗೆ ಸೇರುವಂತಹ ಸಂದರ್ಭ ಉಂಟಾಗುವುದರಿಂದ ವೈರಾಣು ಹರಡಲು ಅನುಕೂಲ ವಾತಾವರಣ ಮಾಡಿಕೊಟ್ಟಂತಾಗುತ್ತದೆ. ಇದನ್ನು ತಪ್ಪಿಸಲು ಹಾಗೂ ವೈರಾಣು ವ್ಯಕ್ತಿಯಿಂದ ವ್ಯಕ್ತಿಗೆ ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಕರ್ನಾಟಕ ಸಾಂಕ್ರಾಮಿಕ ರೋಗಗಳು, ಕೋವಿಡ್-19 ರೆಗ್ಯೂಲೇಷನ್ 2020ರ ನಿಯಮ 12ರಲ್ಲಿ ಹಾಗೂ ಡಿಸಾಸ್ಟರ್ ಮ್ಯಾನೇಜ್‍ಮೆಂಟ್ ಆ್ಯಕ್ಟ್- 2005 ಕಲಂ 24(ಎ), (ಬಿ), 30(2) ರಡಿಯಲ್ಲಿ ಈ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.