Friday, 7th May 2021

ಸ್ವಯಂ ಪ್ರೇರಣೆಯಿಂದ ಅಂಗಡಿ ಮುಗ್ಗಟ್ಟುಗಳ ಬಂದ್

ಸಿರಾ : ಸರ್ಕಾರವು ೧೪ ದಿನಗಳ ಕಾಲ ಜನತಾ ಕರ್ಫ್ಯೂ ವಿಧಿಸಿರುವ ಹಿನ್ನೆಲೆಯಲ್ಲಿ ಸಿರಾ ತಾಲ್ಲೂಕಿನಲ್ಲೂ ಸಹ ಸಾರ್ವಜನಿಕರ ಸ್ವಯಂ ಪ್ರೇರಣೆಯಿಂದ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಕರೋನಾ ಹಿಮ್ಮೆಟ್ಟಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿರುತ್ತಾರೆ.

ತುಮಕೂರು ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಕೊರೋನ ಪ್ರಕರಣಗಳು ಸಿರಾ ತಾಲ್ಲೂಕಿನಲ್ಲಿ ಕಂಡು ಬಂದಿರುವ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ೯.೩೦ ರಿಂದ ಸಿರಾ ನಗರದ ಪ್ರತಿಯೊಂದು ರಸ್ತೆಯಲ್ಲಿಯೂ ವ್ಯಾಪಾರಸ್ಥರು ಹಾಗೂ ನಾಗರೀಕರ ಸ್ವಯಂ ಪ್ರೇರಿತರಾಗಿ ಬಂದ್ ಮಾಡಿರುತ್ತಾರೆ.

Leave a Reply

Your email address will not be published. Required fields are marked *