Sunday, 19th May 2024

ಕ್ರಿಸ್ ಗೇಲ್ ಹೆಸರಿನಲ್ಲಿದ್ದ ದಾಖಲೆ ಮುರಿದ ಬಟ್ಲರ್

ಕೋಲ್ಕತ್ತಾ: ಐಪಿಎಲ್​ನ 31ನೇ ಪಂದ್ಯದಲ್ಲಿ ಜೋಸ್ ಬಟ್ಲರ್ ಭರ್ಜರಿ ಶತಕ ಸಿಡಿಸುವ ಮೂಲಕ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ವಿಶೇಷ ದಾಖಲೆ ಮುರಿದಿದ್ದಾರೆ.

https://youtube.com/shorts/UG89AeRtMcw?feature=share

ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ವಿರಾಟ್ ಕೊಹ್ಲಿ ಬಳಿಕ ಅತೀ ಹೆಚ್ಚು ಶತಕ ಸಿಡಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಭರ್ಜರಿ ಶತಕ ಸಿಡಿಸುವ ಮೂಲಕ ಜೋಸ್ ಬಟ್ಲರ್ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ರೋಚಕ ಜಯ ತಂದು ಕೊಟ್ಟಿದ್ದಾರೆ.
ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡವು ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 223 ರನ್ ಕಲೆ ಹಾಕಿತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕ ಆಟಗಾರ ಜೋಸ್ ಬಟ್ಲರ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಏಕಾಂಗಿಯಾಗಿ ದಿಟ್ಟ ಹೋರಾಟ ಪ್ರದರ್ಶಿಸಿದ ಬಟ್ಲರ್ 60 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್, 9 ಫೋರ್​ಗಳೊಂದಿಗೆ ಅಜೇಯ 107 ರನ್​ ಬಾರಿಸಿದರು. ಈ ಮೂಲಕ 20ನೇ ಓವರ್​ನ ಕೊನೆಯ ಎಸೆತದಲ್ಲಿ 1 ರನ್ ಕಲೆಹಾಕಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 2 ವಿಕೆಟ್​ಗಳ ರೋಚಕ ಜಯ ತಂದುಕೊಟ್ಟರು.

ಈ ಸೆಂಚುರಿಯೊಂದಿಗೆ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ಶತಕ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಜೋಸ್ ಬಟ್ಲರ್ ದ್ವಿತೀಯ ಸ್ಥಾನಕ್ಕೇರಿದರು.

ಅತೀ ಹೆಚ್ಚು ಶತಕ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಈ ಹಿಂದೆ ಕ್ರಿಸ್ ಗೇಲ್ ದ್ವಿತೀಯ ಸ್ಥಾನದಲ್ಲಿದ್ದರು. 141 ಐಪಿಎಲ್​ ಇನಿಂಗ್ಸ್​ಗಳಲ್ಲಿ ಗೇಲ್ ಒಟ್ಟು 6 ಶತಕಗಳನ್ನು ಬಾರಿಸಿ ಈ ದಾಖಲೆ ನಿರ್ಮಿಸಿದ್ದರು.

ಐಪಿಎಲ್ ಶತಕವೀರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ವಿರಾಟ್ ಕೊಹ್ಲಿ. ಕಿಂಗ್ ಕೊಹ್ಲಿ 236 ಇನಿಂಗ್ಸ್​ಗಳಲ್ಲಿ ಒಟ್ಟು 8 ಶತಕಗಳನ್ನು ಬಾರಿಸಿ ಈ ದಾಖಲೆ ಬರೆದಿದ್ದಾರೆ.

Leave a Reply

Your email address will not be published. Required fields are marked *

error: Content is protected !!