ನವದೆಹಲಿ: ಮುಂಬರುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯಲ್ಲಿಯೂ ಮುಂಬೈ ಇಂಡಿಯನ್ಸ್ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸುವುದು ಖಚಿತ. ಇದರ ನಡುವೆ ಸ್ಟಾರ್ ಆಲ್‌ರೌಂಡರ್ ಮುಂಬೈ ತಂಡದ ಮೊದಲನೇ ಪಂದ್ಯಕ್ಕೆ ಬ್ಯಾನ್ ಆಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮೊದಲನೇ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಮುನ್ನಡೆಸುವ ಸಾಧ್ಯತೆ ಇದೆ. ಅಂದ ಹಾಗೆ ಮುಂಬೈ ತಂಡದ ಒಂದು ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯ ಅವರನ್ನು ಏಕೆ ಬ್ಯಾನ್ ಮಾಡಲಾಗಿದೆ ಎಂಬ ಬಗ್ಗೆ ಸಂಪೂರ್ಣ ವಿವರವನ್ನು ಇಲ್ಲಿ ನೀಡಲಾಗಿದೆ.
2024ರ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕನನ್ನಾಗಿ ನೇಮಕ ಮಾಡಲಾಗಿತ್ತ. ಆದರೆ, ಹಾರ್ದಿಕ್ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ತಂಡ ಅತ್ಯಂತ ಹೀನಾಯ ಪ್ರದರ್ಶನವನ್ನು ತೋರಿತ್ತು. ಆದರೆ, ಮುಂಬೈ ಇಂಡಿಯನ್ಸ್ ತಂಡ ಕಳೆದ ಆವೃತ್ತಿಯಲ್ಲಿ ನಿಧಾನಗತಿಯ ಬೌಲಿಂಗ್ ಪ್ರದರ್ಶನ ತೋರಿತ್ತು. ಮೊದಲ ಸ್ಲೋ ಓವರ್ ರೇಟ್ ಪ್ರಮಾದದ ಕಾರಣ ಹಾರ್ದಿಕ್ ಪಾಂಡ್ಯ ಅವರಿಗೆ 12 ಲಕ್ಷ ರೂ. ಗಳನ್ನು ದಂಡವನ್ನು ವಿಧಿಸಲಾಗಿತ್ತು.
IPL 2025 Auction: ನ. 24, 25ರಂದು ಐಪಿಎಲ್ ಮೆಗಾ ಹರಾಜು?
ಇನ್ನು ಎರಡನೇ ಬಾರಿ ಸ್ಲೋ ಓವರ್ ಪ್ರಮಾದ ಉಂಟಾದರೆ, ಆಗ ನಾಯಕನಿಗೆ 24 ಲಕ್ಷ ರೂ. ದಂಡ ಹಾಗೂ ತಂಡದ ಸದಸ್ಯರಿಗೂ ದಂಡವನ್ನು ವಿಧಿಸಲಾಗುತ್ತದೆ. ಒಂದು ವೇಳೆ ಮೂರನೇ ಬಾರಿಯೂ ಇದೇ ಪ್ರಮಾದ ಮುಂದುವರಿದರೆ ನಾಯಕನಿಗೆ 30 ಲಕ್ಷ ರೂ ದಂಡ ಹಾಗೂ ಇನ್ನುಳಿದ ಆಟಗಾರರಿಗೂ ದಂಡವನ್ನು ವಿಧಿಸಲಾಗುತ್ತದೆ.
ಅಲ್ಲದೆ ಮೂರು ಪಂದ್ಯಗಳಲ್ಲಿ ನಿಗದಿತ ಅವಧಿಗೆ 20 ಓವರ್‌ಗಳನ್ನು ಪೂರ್ಣಗೊಳಿಸಿಲ್ಲವಾದರೆ ನಾಯಕನಿಗೆ ಭಾರಿ ಮೊತ್ತದ ದಂಡವನ್ನು ವಿಧಿಸುವುದಲ್ಲದೆ, ಅವರನ್ನು ಒಂದು ಪಂದ್ಯದಿಂದ ಬ್ಯಾನ್ ಮಾಡಲಾಗುತ್ತದೆ. ಕಳೆದ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಕೊನೆಯ ಪಂದ್ಯದಲ್ಲಿ ಲಖನೌ ಸೂಪರ್ ಜಯಂಟ್ಸ್ ವಿರುದ್ಧ ಮುಂಬೈ ನಿಗದಿತ 20 ಓವರ್‌ಗಳನ್ನು ಪೂರ್ಣಗೊಳಿಸಲು ಹೆಚ್ಚಿನ ಸಮಯವನ್ನು ತೆಗೆದುಕೊಂಡಿತ್ತು. ಈ ಹಿನ್ನೆಲೆಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಮುಂದಿನ ಪಂದ್ಯಕ್ಕೆ ನಾಯಕ ಹಾರ್ದಿಕ್ ಪಾಂಡ್ಯ ಬ್ಯಾಟ್ ಆಗಲಿದ್ದಾರೆ.
IPL 2025 Auction: ಐಪಿಎಲ್ ಹರಾಜಿನಲ್ಲಿ ರಾಜ್ಯದ 24 ಆಟಗಾರರು ಭಾಗಿ
ಮುಂಬೈ ಫ್ರಾಂಚೈಸಿ ಉಳಿಸಿಕೊಂಡಿರುವ ಆಟಗಾರರು
2025ರ ಐಪಿಎಲ್ ಟೂರ್ನಿಯ ಮೆಗಾ ಹರಾಜಿನ ನಿಮಿತ್ತ ಮುಂಬೈ ಇಂಡಿಯನ್ಸ್ ತಂಡ ಹಾರ್ದಿಕ್ ಪಾಂಡ್ಯ, ಜಸ್‌ಪ್ರೀತ್ ಬುಮ್ರಾ, ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್ ಹಾಗೂ ತಿಲಕ್ ವರ್ಮಾ ಅವರನ್ನು ಉಳಿಸಿಕೊಂಡಿದೆ. ಮೊದಲನೇ ಆಯ್ಕೆಯ ರಿಟೆನ್ಷನ್ ಆಗಿ ಜಸ್‌ಪ್ರೀತ್ ಬುಮ್ರಾಗೆ 18 ಕೋಟಿ ರೂ., ಸೂರ್ಯಕುಮಾರ್ ಯಾದವ್, ರೋಹಿತ್ ಶರ್ಮಾ ಹಾಗೂ ತಿಲಕ್ ವರ್ಮಾ ಅವರನ್ನು ಕ್ರಮವಾಗಿ 16.35 ಕೋಟಿ ರೂ, 16.30 ಕೋಟಿ ರೂ ಹಾಗೂ 8 ಕೋಟಿ ರೂ. ಗಳಿಗೆ ನೀಡಲಾಗಿದೆ. ಇನ್ನು ಅನ್‌ಕ್ಯಾಪ್ಡ್ ಆಟಗಾರರನ್ನು ಉಳಿಸಿಕೊಳ್ಳಲು ಮುಂಬೈಗೆ ಆರ್‌ಟಿಎಂ ನಿಯಮ ನೆರವು ನೀಡಲಿದೆ. ಅಂದ ಹಾಗೆ ಮುಂಬೈ ಇಂಡಿಯನ್ಸ್ 45 ಕೋಟಿ ರೂ. ಗಳೊಂದಿಗೆ ಮೆಗಾ ಹರಾಜಿಗೆ ಹೋಗಲಿದೆ.