Monday, 16th May 2022

ಸಂವೇದಿ ಸೂಚ್ಯಂಕ 100ಕ್ಕೂ ಅಧಿಕ ಅಂಕ ಕುಸಿತ

ಮುಂಬೈ: ದುರ್ಬಲ ವಹಿವಾಟು ಮತ್ತು ವಿದೇಶಿ ಬಂಡವಾಳದ ಹೊರಹರಿವು ಮುಂದು ವರಿದು  ಗುರುವಾರ ಬಾಂಬೆ ಷೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ 100ಕ್ಕೂ ಅಧಿಕ ಅಂಕ ಕುಸಿತ ಕಂಡಿದೆ.

ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 112.13 ಅಂಕ ಇಳಿಕೆಯಾಗಿದ್ದು, 59,896.20 ಅಂಕಗಳಲ್ಲಿ ವಹಿವಾಟು ನಡೆಸಿದೆ. ಎನ್ಎಸ್ಇ ನಿಫ್ಟಿ 35.95 ಅಂಕ ಕುಸಿದಿದ್ದು, 17,862.70 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ.

ಮಹೀಂದ್ರ ಆಯಂಡ್ ಮಹೀಂದ್ರ, ಎಚ್ ಸಿಎಲ್ ಟೆಕ್, ಟೆಕ್ ಮಹೀಂದ್ರ, ಡಾ.ರೆಡ್ಡೀಸ್, ಮಾರುತಿ, ಬಜಾಜ್ ಆಟೋ ಮತ್ತು ಟಿಸಿಎಸ್ ಷೇರುಗಳು ನಷ್ಟ ಕಂಡಿದೆ. ಮತ್ತೊಂದೆಡೆ ಎಸ್ ಬಿಐ, ಎಚ್ ಡಿಎಫ್ ಸಿ ಬ್ಯಾಂಕ್, ಬಜಾಜ್ ಫಿನ್ ಸರ್ವ್ ಮತ್ತು ಬಜಾಜ್ ಫೈನಾನ್ಸ್ ಷೇರುಗಳು ಲಾಭಗಳಿಸಿದೆ.

ಬುಧವಾರ 314.04 ಅಂಕಗಳಷ್ಟು ಕುಸಿತ ಕಂಡಿದ್ದು, 60,008.33 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿತ್ತು.