Sunday, 23rd January 2022

11 ಸಾವಿರದ 919 ಜನರಲ್ಲಿ ಕರೊನಾ ಸೋಂಕು ಪತ್ತೆ

#covid

ನವದೆಹಲಿ: ದೇಶದಲ್ಲಿ ಕರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 11 ಸಾವಿರದ 919 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, ಒಂದೇ ದಿನದಲ್ಲಿ70 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈವರೆಗೆ ಕೋವಿಡ್ ಗೆ  ಮೃತಪಟ್ಟವರ ಸಂಖ್ಯೆ 464623 ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 128762 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 11242 ಜನರು ಕೋವಿಡ್ ನಿಂದ ಗುಣಮುಖರಾಗಿ ದ್ದಾರೆ. 24 ಗಂಟೆಯಲ್ಲಿ 73,44,739 ಜನರಿಗೆ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಈವರೆಗೆ ಒಟ್ಟು 1,14,46,32,851 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.