Wednesday, 1st December 2021

13,058 ಕರೋನಾ ಪ್ರಕರಣ ದಾಖಲು: 164 ಮಂದಿ ಸಾವು

ನವದೆಹಲಿ: ದೇಶದಲ್ಲಿ ಕರೋನಾ ಪ್ರಕರಣಗಳು ಏರಿಕೆ -ಇಳಿಕೆಯಾಗುತ್ತಿದೆ. ಕಳೆದ 24 ತಾಸುಗಳ ಅವಧಿಯಲ್ಲಿ 13,058 ಪ್ರಕರಣಗಳು ದಾಖಲಾಗಿದ್ದು, 164 ಮಂದಿ ಸಾವನ್ನಪ್ಪಿದ್ದಾರೆ.

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,40,94,373ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,52,454ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 1,83,118 ಕ್ಕೆ ತಲುಪಿದೆ.

ಕಳೆದ 24 ಗಂಟೆಗಳಲ್ಲಿ 19,470 ಮಂದಿ ಗುಣಮುಖರಾಗಿದ್ದು, ಚೇತರಿಸಿಕೊಂಡವರ ಸಂಖ್ಯೆ 3,34,58,801ಕ್ಕೆ ತಲುಪಿದೆ.