Sunday, 23rd January 2022

ನರ್ಸಿಂಗ್ ಕಾಲೇಜಿನ 15 ವಿದ್ಯಾರ್ಥಿಗಳಿಗೆ ಕರೋನಾ

#corona

ತುಮಕೂರು: ನಗರದ ಸಿದ್ದಗಂಗಾ ನರ್ಸಿಂಗ್ ಕಾಲೇಜಿನ 8, ವರದರಾಜ ಕಾಲೇಜಿನ 7 ವಿದ್ಯಾರ್ಥಿಗಳಿಗೆ ಕರೋನಾ ಪಾಸಿಟಿವ್ ಕಂಡುಬಂದಿದ್ದು, ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ವಹಿಸಿದೆ.

ಇತ್ತೀಚೆಗೆ ಕೇರಳ ರಾಜ್ಯದಿಂದ ವ್ಯಾಸಂಗಕ್ಕೆ ಬಂದಿದ್ದರಿಂದ ಕರೋನಾ ಸೋಂಕು ತಗುಲಿರುವುದು ದೃಢವಾಗಿದ್ದು, 15 ವಿದ್ಯಾರ್ಥಿಗಳನ್ನು ಕ್ವಾರಂಟೈನ್ ಮಾಡ ಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದಿರುವ ಸುಮಾರು 150 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಸೋಂಕಿತರ ಗಂಟಲು ದ್ರವವನ್ನು ಪರೀಕ್ಷೆಗಾಗಿ ಬೆಂಗಳೂರಿನ ಲ್ಯಾಬ್ ಗೆ ಕಳುಹಿಸಲಾಗಿದೆ. ಎರಡು ಕಾಲೇಜುಗಳನ್ನು ಕಂಟೋಂನ್ಮೆಂಟ್ ಜೀನ್ ಎಂದು ಘೋಷಿಸಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಕಡ್ಡಾಯ ಮಾಡಲಾಗಿದೆ. ವಿದ್ಯಾರ್ಥಿ ಗಳು ತರಗತಿಗಳಿಗೆ ಪ್ರವೇಶ ಪಡೆಯಲು ಕನಿಷ್ಠ ಒಂದು ಡೋಸ್ ವ್ಯಾಕ್ಸಿನ್ ತೆಗೆದುಕೊಳ್ಳಬೇಕು, ಇಲ್ಲದಿದ್ದರೆ ತರಗತಿಗೆ ಅವಕಾಶ ನಿರಾಕರಿಸಲಾಗುವುದು. ಈ ಬಗ್ಗೆ ಎಲ್ಲಾ ಕಾಲೇಜುಗಳಿಗೆ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.