Wednesday, 1st December 2021

15,981 ಜನರಿಗೆ ಕರೋನಾ ಪಾಸಿಟಿವ್, 166 ಸೋಂಕಿತರು ಸಾವು

ನವದೆಹಲಿ: ದೇಶದಲ್ಲಿ ಶೇ.5.22ರಷ್ಟು ಕರೋನಾ ಸೋಂಕಿನ ಪ್ರಕರಣ ಕಡಿಮೆ ವರದಿಯಾಗಿದೆ. 15,981 ಜನರಿಗೆ ಕರೋನಾ ಪಾಸಿಟಿವ್ ವರದಿಯಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯವು ಮಾಹಿತಿ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 15,981 ಜನರಿಗೆ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 3,40,53,573ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 166 ಸೋಂಕಿತರು ಮೃತಪಟ್ಟಿದ್ದಾರೆ. ಹೀಗಾಗಿ ಇದುವರೆಗೆ ಮೃತಪಟ್ಟವರ ಸಂಖ್ಯೆ 4,51,980ಕ್ಕೆ ಏರಿಕೆಯಾಗಿದೆ.