Friday, 19th August 2022

16,103 ಹೊಸ ಕೋವಿಡ್ ಸೋಂಕು ಪ್ರಕರಣ ದೃಢ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 16,103 ಹೊಸ ಕೋವಿಡ್ ಸೋಂಕು ಪ್ರಕರಣಗಳು ದಾಖಲಾಗಿದೆ.

31 ಸೋಂಕಿತರು ಮೃತಪಟ್ಟಿದ್ದಾರೆ. ಈವರೆಗೆ ದೇಶದಲ್ಲಿ ದಾಖಲಾದ ಕೋವಿಡ್‌ ಪ್ರಕರಣಗಳ ಒಟ್ಟು ಸಂಖ್ಯೆ 4,35,02,429 ರಷ್ಟಾಗಿದ್ದು, ಮೃತಪಟ್ಟ 31 ಮಂದಿ ಸೇರಿದಂತೆ ಸೋಂಕಿಗೆ ಬಲಿಯಾದವರ ಸಂಖ್ಯೆ 5,25,199ಕ್ಕೆ ಏರಿಕೆಯಾಗಿದೆ.

ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 1,11,711ಕ್ಕೆ ಏರಿಕೆಯಾಗಿದ್ದು, ಪ್ರತಿದಿನದ ಪಾಸಿಟಿವಿಟಿ ದರವು ಶೇ 4.27 ರಷ್ಟಿದೆ ಎಂದು ಇಲಾಖೆ ಮಾಹಿತಿ ನೀಡಿದೆ.