Monday, 16th May 2022

ಮೀನು ಸಂಸ್ಕರಣಾ ಘಟಕದಲ್ಲಿ ರಾಸಾಯನಿಕ ಸೋರಿಕೆ: 20 ಮಂದಿ ಅಸ್ವಸ್ಥ

ಮಂಗಳೂರು: ನಗರದ ಹೊರವಲಯದ ಬೈಕಂಪಾಡಿಯಲ್ಲಿರುವ ಮೀನು ಸಂಸ್ಕರಣಾ ಘಟಕದಲ್ಲಿ ರಾಸಾಯನಿಕ ಸೋರಿಕೆಯಾಗಿ, 20 ನೌಕರರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೈಕಂಪಾಡಿ ಕೈಗಾರಿಕಾ ಪ್ರದೇಶದ ಮೀನು ಸಂಸ್ಕರಣಾ ಘಟಕ ಎವರೆಸ್ಟ್ ಸೀ ಫುಡ್ಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಘಟನೆ ನಡೆದಿದ್ದು, ಈ ಸಂದರ್ಭದಲ್ಲಿ ಕನಿಷ್ಠ 80 ಉದ್ಯೋಗಿಗಳು ಅಲ್ಲಿ ಇದ್ದರು ಎನ್ನಲಾಗಿದೆ. ರಾಸಾಯನಿಕ ಸೋರಿಕೆಯಾದ ನಂತರ 20 ಉದ್ಯೋಗಿಗಳಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತು. ನಂತರ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ತಂಡಗಳು ಧಾವಿಸಿವೆ.