Thursday, 19th May 2022

ಸೋಂಕಿತರ ಸಂಖ್ಯೆಯಲ್ಲಿ ಕುಸಿತ: 27,254 ಜನರಲ್ಲಿ ವೈರಸ್‌ ಪತ್ತೆ

#corona

ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 27,254 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 3,32,64,175ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 219 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಮೃತರ ಸಂಖ್ಯೆ 442874 ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 374269 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 37687 ಜನರು ಗುಣಮುಖರಾಗಿದ್ದಾರೆ. ಈವರೆಗೆ 32447032 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ ಒಟ್ಟು 74,38,37,643 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.