Friday, 19th August 2022

ದಾಸರಹಳ್ಳಿ: 31 ವಿದ್ಯಾರ್ಥಿಗಳಲ್ಲಿ ಕರೋನಾ ಸೋಂಕು

ಬೆಂಗಳೂರು: ಬಿಬಿಎಂಪಿಯ ದಾಸರಹಳ್ಳಿ ವಲಯದ ಎರಡು ಶಾಲೆಯ ಒಟ್ಟು 31 ವಿದ್ಯಾರ್ಥಿಗಳಲ್ಲಿ ಕರೋನಾ ಸೋಂಕು ಕಾಣಿಸಿ ಕೊಂಡಿದೆ. ಸೋಂಕಿತರು ಪತ್ತೆಯಾದ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದೆ.

ದಾಸರಹಳ್ಳಿ ವಲಯದ ಪೀಣ್ಯ ಎರಡನೇ ಹಂತದ ಖಾಸಗಿ ಶಾಲೆಯ 5ನೇ ತರಗತಿಯ 10 ವಿದ್ಯಾರ್ಥಿಗಳಿಗೆ ಸೋಮವಾರ ಸೋಂಕು ಇರುವುದು ದೃಢಪಟ್ಟಿದೆ. ಕಳೆದ ಗುರುವಾರ ರಾಜಗೋಪಾಲ ನಗರದ ಖಾಸಗಿ ಶಾಲೆಯ 5 ಮತ್ತು 6ನೇ ತರಗತಿಯ ಒಟ್ಟು 21 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿತ್ತು.

ಉಳಿದ ಎಲ್ಲ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಇತರೆ ಸಿಬ್ಬಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಕೊಠಡಿ ಹಾಗೂ ಆವರಣಕ್ಕೆ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಮಾಡಿ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ನಿಗಾ ವಹಿಸಲಾಗುತ್ತಿದೆ ಎಂದು ಆರೋಗ್ಯ ವೈದ್ಯಾಧಿಕಾರಿ ಸುರೇಶ್ ರುದ್ರಪ್ಪ ಮಾಹಿತಿ ನೀಡಿದ್ದಾರೆ.