Monday, 15th August 2022

ಒಂದೇ ಕುಟುಂಬದ 32 ಜನರಿಗೆ ಕರೋನಾ ಸೋಂಕು

#corona

ಕೊಡಗು: ಕೊಡಗು ಜಿಲ್ಲೆಯಲ್ಲಿ ಒಂದೇ ಕುಟುಂಬದ 32 ಜನರಿಗೆ ಕರೋನಾ ಸೋಂಕು ತಗುಲಿದೆ.

ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಕೆದಮುಳ್ಳೂರು ಗ್ರಾಮದ ಚುರಿಯಾಲ್ ಕುಟುಂಬದ 32 ಜನರಿಗೆ ಸೋಂಕು ದೃಢಪಟ್ಟಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಕರೋನಾ ಎರಡನೇ ಅಲೆ ಅಬ್ಬರಕ್ಕೆ ಜನರು ತತ್ತರಿಸುತ್ತಿದ್ದು, ಈಗಾಗಲೇ ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ಇಲ್ಲದೇ ರೋಗಿಗಳು ಮೃತಪಡುತ್ತಿದ್ದಾರೆ.