Tuesday, 17th May 2022

ದಾವಣಗೆರೆಯ 4 ವಿದ್ಯಾರ್ಥಿಗಳಿಗೆ ಕರೋನಾ ಸೋಂಕು: ಕೊಠಡಿ ಸೀಲ್‌ಡೌನ್

covid

ದಾವಣಗೆರೆ : ದಾವಣಗೆರೆ ಜಿಲ್ಲೆಯ 4 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ದೇವರಹಳ್ಳಿಯ ನವೋದಯ ಶಾಲೆಯ 4 ವಿದ್ಯಾರ್ಥಿಗಳಿಗೆ ಸೋಂಕು ತಗುಲಿದ್ದು 4 ಕೊಠಡಿಗಳನ್ನು ಸೀಲ್‌ಡೌನ್ ಮಾಡಲಾಗಿದೆ.

ದೇವರಹಳ್ಳಿಯ ನವೋದಯ ಶಾಲೆಯಲ್ಲಿ 497 ವಿದ್ಯಾರ್ಥಿಗಳು, 57 ಬೋಧಕ, ಬೋಧಕೇತರ ಸಿಬ್ಬಂದಿಯ ಸ್ವಾಬ್ ಟೆಸ್ಟ್ ಮಾಡಿದ್ದು ಕೋವಿಡ್ ಪರೀಕ್ಷೆಯಲ್ಲಿ 4 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದೆ. ಸೋಂಕಿತ ವಿದ್ಯಾರ್ಥಿಗಳ ಗಂಟಲು ದ್ರವವನ್ನು ಪರೀಕ್ಷೆಗೆ ರವಾನಿಸಿದ್ದು ಮತ್ತೆ ಪಾಸಿಟಿವ್ ಬಂದರೆ ಜೀನೊಮಿಕ್ ಪರೀಕ್ಷೆಗೆ ಕಳಿಸಲಾಗುತ್ತೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.