Wednesday, 1st February 2023

ಪೆಟ್ರೋಲ್ – ಡೀಸೆಲ್ ಬೆಲೆಯಲ್ಲಿ 40 ಪೈಸೆ ಇಳಿಕೆ

ನವದೆಹಲಿ: ಯಥಾಸ್ಥಿತಿಯಲ್ಲಿ ಮುಂದುವರೆದಿದ್ದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನವೆಂಬರ್ 1ರ ಕರ್ನಾಟಕ ರಾಜ್ಯೋತ್ಸವ ದಿನದಂದು ಇಳಿಕೆಯಾಗಿದೆ.

ಪ್ರತಿ ಲೀಟರ್ ಪೆಟ್ರೋಲ್ – ಡೀಸೆಲ್ ಬೆಲೆಯಲ್ಲಿ 40 ಪೈಸೆಯಷ್ಟು ಕಡಿಮೆಯಾಗಿದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 101.52 ರೂಪಾಯಿಗಳಾಗಿದ್ದರೆ, ಡೀಸೆಲ್ ದರ 87.47 ರೂಪಾಯಿಗಳಾಗಿದೆ.

ನವದೆಹಲಿಯಲ್ಲಿ ಪೆಟ್ರೋಲ್ ದರ 96.65 ರೂಪಾಯಿಗಳಾಗಿದ್ದು, ಡೀಸೆಲ್ ದರ 89.82 ರೂಪಾಯಿಗಳಾಗಿದೆ. ಮುಂಬೈನಲ್ಲಿ ಪೆಟ್ರೋಲ್ ದರ 106.31 ರೂಪಾಯಿಗಳಾಗಿದ್ದು, ಡೀಸೆಲ್ ದರ 94.27 ರೂಪಾಯಿಗಳಾಗಿದೆ.

ಅಂತರಾಷ್ಟ್ರೀಯ ಮಾರುಕಟ್ಟೆಯ ಬೆಲೆಗಳಿಗೆ ಅನುಗುಣವಾಗಿ ಭಾರತದ ತೈಲ ಕಂಪನಿ ಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ನಿಗದಿಪಡಿಸುತ್ತಿದ್ದು, ಇದೀಗ ಅಂತರಾ ಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ ಎಂದು ಹೇಳಲಾಗಿದೆ.

error: Content is protected !!